News Karnataka Kannada
Friday, May 10 2024
ಬೆಂಗಳೂರು ನಗರ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿಷೇಧಿತ ಔಷಧಿ ಜಪ್ತಿ

Photo Credit :

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿಷೇಧಿತ ಔಷಧಿ ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುವೈಟ್ ಗೆ ಹೊರಟಿದ್ದ ವ್ಯಕ್ತಿಯೊಬ್ಬನಿಂದ ಫೆನ್ಸೆಡಿಲ್ ನ್ಯೂ ಕಾಫ್ ಲಿಂಟನ್ ಎಂಬ ನಿಷೇಧಿತ ಔಷಧಿ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಮಾದಕ ವಸ್ತು ಕಳ್ಳಸಾಗಣೆ ನಿಯಂತ್ರಣ ದಳ(ಎನ್ ಸಿಬಿ) ಅಧಿಕಾರಿಗಳು ಸುಮಾರು 151 ಬಾಟಲಿಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ಆಂಧ್ರಪ್ರದೇಶ ನಿವಾಸಿಯೆಂದು ತಿಳಿದುಬಂದಿದೆ.

ಆಂಧ್ರಪ್ರದೇಶದಲ್ಲಿ ಔಷಧಿ ಖರೀದಿಸಿದ್ದ ಈತ ಬ್ಯಾಗ್ ಗಳಲ್ಲಿ ತುಂಬಿಕೊಂಡು ಇದನ್ನು ಕೊಂಡೊಯ್ಯುತ್ತಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಔಷಧಿಯಲ್ಲಿ ನಿಷೇಧಿತ ಮಾದಕ ವಸ್ತುವಿರುವ ಕಾರಣದಿಂದ ಇದರ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು