ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆಗುವ ವೇಳೆ ಒಂದೇ ದಿಕ್ಕಿನಲ್ಲಿ ಎರಡು ವಿಮಾನಗಳು ಮುಖಾಮುಖಿ ಬಂದಿದ್ದು ಭಾರಿ ಅನಾಹುತ ತಪ್ಪಿದೆ.ಒಂದೇ ಸಮಯದಲ್ಲಿ ಟೇಕ್ ಆಫ್ ಗೆ ಬಂದ ಎರಡೂ ಇಂಡಿಗೋ ವಿಮಾನಗಳು ಮುಖಾಮುಖಿಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಜನವರಿ 7 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕೊಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ 6E455 ಮತ್ತು 6E246 ಸಂಖ್ಯೆಯ ಇಂಡಿಗೋ ವಿಮಾನಗಳು. ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆ ಕುರಿತು ಹಿರಿಯ ಅಧಿಕಾರಿಗಳು ಸ್ವಷ್ಟನೆ ಕೇಳಿದ್ದಾರೆ. 2 ರನ್ ವೇ ಇದ್ದರೂ ನಿರ್ಲಕ್ಷ್ಯಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಯಬೇಕಿದೆ.