ಬೆಂಗಳೂರು ನಗರ

ಕೆಐಎಡಿಬಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಭೂ ಪರಿಹಾರ ವಿತರಣೆ ಸುಲಭ: ಸಚಿವ ನಿರಾಣಿ

ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದಾಗಿ ಇನ್ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ವಿತರಿಸಲು ಯಾವುದೇ ಅಡೆತಡೆಗಳು ಎದುರಾಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರತ್ಯೇಕ ಕಾಯ್ದೆಗಳಿದ್ದವು. ಇತ್ತೀಚೆಗೆ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ರೈತರಿಗೆ ಯಾವುದೇ ಸಮಸ್ಯೆಗಳೆದುರಾಗದಂತೆ ಪರಿಹಾರ ನೀಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಹೊಸ ಭೂ ಸ್ವಾದೀನ ಕಾಯ್ದೆ 2013ರ ಅನ್ವಯ ಭೂ ಪರಿಹಾರ ಒದಗಿಸುವ ಸಂಬಂಧ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇನ್ನು ಮುಂದೆ ಪರಿಹಾರ ವಿತರಣೆಯಲ್ಲಿ ವಿಳಳಬವಾಗುವುದಿಲ್ಲ ಎಂದರು.

ಕೆಐಎಡಿಬಿ ಕಾಯ್ದೆ ಕಾಲಂ 28/4 ಅಡಿ ಅಂತಿಮ ಅಸೂಚನೆ ಹೊರಡಿಸಿ ಸ್ವಾಧೀನಕ್ಕೆ ಪಡೆದ ಜಮೀನಿಗೆ ದರ ನಿಗದಿಪಡಿಸುವ ಸಂಬಂಧ ಆ ಪ್ರದೇಶದ ಜಿಲ್ಲಾಧಿಕಾರಿ / ಕೆಐಎಡಿಬಿಯ ವಿಶೇಷ ಅಧಿಕಾರಿ, ಭೂ ದರ ನಿರ್ಧರಣಾ ಸಲಹಾ ಸಮಿತಿ ಸಭೆಯಲ್ಲಿ ಭೂ ಮಾಲೀಕರದೊಂದಿಗೆ ಸಮಾಲೋಚಿಸಿ ದರ ನಿಗದಿ ಮಾಡಲಾಗುವುದು ಎಂದು ನಿರಾಣಿ ಹೇಳಿದರು.

ಕೆಐಎಡಿಬಿ ವತಿಯಿಂದ ಭೂ ಸ್ವಾಧೀನಪಡಿಸಿದ ಜಮೀನಿಗೆ ನೀಡಉವ ಪರಿಹಾರ ಮೊತ್ತವನು ಮೀರದಂತೆ ರೈತರು ಕೃಷಿ ಜಮೀನನ್ನು ಖರೀದಿಸಿದ ಸಂದರ್ಭದಲ್ಲಿ ಮುದ್ರಾಂಕ ಶುಲ್ಕ ಶೇ.50ರಷ್ಟು ರಿಯಾಯ್ತಿ ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯ್ತಿ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಜಮೀನುಗಳಿಗೆ ಪರಿಹಾರದ ಮೊತ್ತವನ್ನು ಸಂಬಂಧಪಟ್ಟ ಖಾತೆದಾರರು/ಹಿತಾಸಕ್ತದಾರರಿಗೆ ಆರ್‍ಟಿಜಿಎಸ್ ಮುಖಾಂತರ ಭೂಮಾಲೀಕರ ಖಾತೆಗಳಿಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ. ಇದರಿಂದ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ನಿರಾಣಿ ಅವರು ಸ್ಪಷ್ಟಪಡಿಸಿದರು.

Sneha Gowda

Recent Posts

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

5 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

12 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

27 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

30 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

31 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

47 mins ago