ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಶೀಘ್ರದಲ್ಲೇ ಪದಾಧಿಕಾರಿಗಳ ನೇಮಕ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
೧೦ ಜಿಲ್ಲೆಗಳಲ್ಲಿ ಅಧ್ಯಕ್ಷರ ಬದಲಾವಣೆ ಮಾಡಲಾಗಿದೆ. ಹೊಸ ಬ್ಲಾಕ್ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ನೇಮಕವಾದ ಬಳಿಕ ದೇಶದಾದ್ಯಂತ ಪಕ್ಷದಲ್ಲಿ ಚಟುವಟಿಕೆಗಳು ಮತ್ತೆ ಚುರುಕುಗೊಂಡಿದೆ ಎಂದಿದ್ದಾರೆ.