News Karnataka Kannada
Tuesday, May 07 2024
ಬೆಂಗಳೂರು ನಗರ

ಕೆ.ಪಿ.ನಂಜುಂಡಿಗೆ ಮಂತ್ರಿ ಪದವಿ ನೀಡದಿದ್ದರೆ ಬಿಜೆಪಿ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ: ವಿಶ್ವಕರ್ಮ ಸಮುದಾಯ

Kp Nanjundi
Photo Credit :

ಬೆಂಗಳೂರು : ಹಿಂದುಳಿದ ವರ್ಗಗಳ ನಾಯಕ, ವಿಧಾನ ಪರಿಷತ್ ಸದಸ್ಯ‌ ಕೆ.ಪಿ.ನಂಜುಂಡಿ ಅವರಿಗೆ ಬಿಜೆಪಿ ನೀಡಿದ‌ ಭರವಸೆಯಂತೆ ಮಂತ್ರಿ ಪದವಿ ನೀಡದೆ ಕಡೆಗಣಿಸಿದರೆ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ನಂಜುಂಡಿ ಅವರಿಂದಲೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯ ಎಚ್ಚರಿಕೆ ನೀಡಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ‌ ವಿಶ್ವಕರ್ಮ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ ಮಳವಳ್ಳಿ ಸುದ್ದಿಗಾರರ ಜತೆ ಮಾತನಾಡಿದರು. ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ವರಿಷ್ಠರೊಂದಿಗೆ ಮಾತನಾಡುವೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಸಮುದಾಯದ ಮುಖಂಡರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಬೇಕೆಂದಿದ್ದೇವೆ. ಪಕ್ಷದ ರಾಜ್ಯ ಪದಾಧಿಕಾರಿಗಳಿಗೂ ಮನವಿ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಮುದಾಯದ 20,000 ಜನರ ಸಮಾವೇಶ ನಡೆಸಿ ಕೆ.ಪಿ.ನಂಜುಂಡಿ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.

ಇಷ್ಟಾಗಿಯೂ ನಿರ್ಲಕ್ಷಿಸಿದರೆ ಸಮುದಾಯಕ್ಕೆ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ನೀಡದ ಪಕ್ಷಕ್ಕೂ ರಾಜೀನಾಮೆ ನೀಡುತ್ತೇವೆ. ಸಮುದಾಯದ ಮುಖಂಡರು ಮಾತ್ರವಲ್ಲ, ಪಕ್ಷದ ವಿವಿಧ ಹುದ್ದೆಗಳಲ್ಲಿ ಇರುವವರೂ ಭಾಗವಹಿಸಿದ್ದೇವೆ. ಕೆ.ಪಿ.ನಂಜುಂಡಿ ಅವರನ್ನು ಮಂತ್ರಿ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯದ ಮುಖಂಡರು ಎಚ್ಚರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು