ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು: ಕೆ.ಎಸ್.ಈಶ್ವರಪ್ಪ

ಬೆಂಗಳೂರು, ಮೇ 31: ಕೇಸರಿ ಧ್ವಜವು ಭವಿಷ್ಯದಲ್ಲಿ ದೇಶದ ರಾಷ್ಟ್ರಧ್ವಜವಾಗಬಹುದು ಎಂದು ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

ಈಶ್ವರಪ್ಪ ಮಾತನಾಡಿ, “ಈ ನಾಡಿನಲ್ಲಿ ಹಿಂದಿನಿಂದಲೂ ಕೇಸರಿ ಧ್ವಜಕ್ಕೆ ಗೌರವವಿದೆ, ಅದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ, ಕೇಸರಿ ಧ್ವಜ ತ್ಯಾಗ ಬಲಿದಾನದ ಸಂಕೇತವಾಗಿದೆ, ಅದನ್ನು ಮೈಗೂಡಿಸಿಕೊಳ್ಳಲು ಆರ್‌ ಎಸ್‌ ಎಸ್‌ ಕಚೇರಿಯಲ್ಲಿ ಕೇಸರಿ ಧ್ವಜದ ಮುಂದೆ ಪ್ರಾರ್ಥಿಸುತ್ತೇವೆ.

ನಮ್ಮಲ್ಲಿ ಮೌಲ್ಯಗಳಿವೆ, ಕೇಸರಿ ಧ್ವಜ ಮುಂದೊಂದು ದಿನ ಈ ದೇಶದಲ್ಲಿ ರಾಷ್ಟ್ರಧ್ವಜವಾಗಬಹುದು, ಅದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್‌ನವರು ಹೇಳಿದಾಗಲೆಲ್ಲಾ ನಾವು ತ್ರಿವರ್ಣ ಧ್ವಜವನ್ನು ಹಾರಿಸಬೇಕಾಗಿಲ್ಲ. ನಮ್ಮ ಸಂವಿಧಾನದ ಪ್ರಕಾರ ತ್ರಿವರ್ಣ ಧ್ವಜ ರಾಷ್ಟ್ರಧ್ವಜವಾಗಿದೆ ಮತ್ತು ಅದಕ್ಕೆ ಗೌರವವನ್ನು ನಾವು ನೀಡುತ್ತೇವೆ” ಎಂದು ಹೇಳಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago