ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾದರೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು, ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದ್ರೆ ಮತ್ತೆ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಾದರೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಎಂದು ಹೇಳಿದ್ದಾರೆ.
ಇನ್ನು ಸಂಪುಟ ಪುನಾರಚನೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ಡಾ.ಕೆ. ಸುಧಾಕರ್, ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ಆಕಾಂಕ್ಷಿಗಳು ದೆಹಲಿ ಭೇಟಿ ಗೊತ್ತಿಲ್ಲ. ನಾನು ಮೂರನೇ ಅಲೆಯಲ್ಲಿ ಸಿಕ್ಕಿಹಾಕಿಕೊಂಡಿದ್ದೇನೆ. ರಾಜಕೀಯದ ಕಡೆ ಗಮನ ಹರಿಸಿಲ್ಲ ಎಂದರು.