ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದು ಸಿಎಂ ಬೊಮ್ಮಾಯಿ ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.
ಸಿಎಂ ಬೊಮ್ಮಾಯಿ ಅವರಿಗೆ ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆ, ಚಿಕಿತ್ಸೆಗೆ ಒಳಪಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಸಿಎಂ ಪುತ್ರನ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಉಳಿದ ಸದಸ್ಯರ ವರದಿಯನ್ನು ನಿರೀಕ್ಷಿಸಲಾಗಿದೆ. ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದ್ದು, ಸಿಎಂ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟಿದೆ.