ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯ್ಲಲಿ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಿಂದಲೇ ವರ್ಚುವಲ್ ಮೂಲಕ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಆದರೂ ಇನ್ನೂ ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.