ಕೋವಿಡ್‌ನಿಂದ ಬೆಂಗಳೂರಿನಲ್ಲಿ ಮೂರು ದಿನಗಳಿಂದ ಯಾವುದೇ ಸಾವು ಸಂಭವಿಸಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್‌ನಿಂದಾಗಿ ಬೆಂಗಳೂರಿನಲ್ಲಿ ಒಂದೇ ಒಂದು ಸಾವು ಸಂಭವಿಸಿಲ್ಲ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 28 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ವಾಣಿಜ್ಯ ಚಟುವಟಿಕೆಗಳು, ಪಬ್‌ಗಳು, ಬಾರ್‌ ಮತ್ತು ಮನರಂಜನಾ ಕೇಂದ್ರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಕೂಡ ಸರ್ಕಾರ ಹಿಂಪಡೆದಿದೆ. ಹೀಗಾಗಿ ಜನರು ಬೇಸಿಗೆ ರಜೆಯನ್ನು ಯಾವುದೇ ಭಯವಿಲ್ಲದೆ ಕಳೆಯಬಹುದಾಗಿದೆ.

ಕೋವಿಡ್ ಮೂರನೇ ಅಲೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕಳೆದ ಶುಕ್ರವಾರ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಅಲ್ಲದೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 49 ಕೋವಿಡ್ ಪ್ರಕರಣಗಳು ಮಾತ್ರ ವರದಿಯಾಗಿವೆ.

 

Swathi MG

Recent Posts

ಥಾಯ್ಲೆಂಡ್ ಓಪನ್ 2024: ಸಾತ್ವಿಕ್-ಚಿರಾಗ್ ಜೋಡಿಗೆ ಭರ್ಜರಿ ಗೆಲುವು

ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

6 mins ago

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

43 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

46 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

60 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

1 hour ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

1 hour ago