News Karnataka Kannada
Monday, May 13 2024
ಬೆಂಗಳೂರು ನಗರ

ಕೋವಿಡ್‌: ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ

Photo Credit :

ಕೋವಿಡ್‌: ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಜ್ವರದಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಕೊರೊನಾ ಲಕ್ಷಣಗಳು ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದ ಡಿಕೆ.ಶಿವಕುಮಾರ್ ಅವರನ್ನು ಸೆಪ್ಟೆಂಬರ್ 2ರಂದು ಜಯನಗರದ ಅಪೊಲೋ ಸ್ಟೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಜ್ವರದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದೀಗ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಡಿಕೆ.ಶಿವಕುಮಾರ್ ಅವರಿಗೆ ಕೊರೊನಾ ದೃಢಪಟ್ಟಿತ್ತು. ಚಿಕಿತ್ಸೆ ಪಡೆದಿದ್ದ ಡಿಕೆಶಿಯವರು ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿದ್ದರು. ಇದಾದ ಕೆಲವೇ ದಿನಗಳ ಬಳಿಕ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು