ಕೋವಿಡ್ ಉಲ್ಬಣಿಸಿದರೆ ಹಿಂದೆ ಇದ್ದಂತಹ ನಿಯಮಗಳನ್ನು ಜಾರಿ ಮಾಡುತ್ತೇವೆ ; ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಉಲ್ಬಣಿಸಿದರೆ ಹಿಂದೆ ಇದ್ದಂತಹ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಸಚಿವ ಆರ್.ಅಶೋಕ್ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಾಸ್ಕ್ ಬಳಸುದು ಕಡ್ಡಾಯವಾಗಿ ಮುಂದುವರೆಯಲಿದೆ.  ರಾಜಕೀಯ ಸಮಾರಂಭ, ಮದುವೆ ನಿಯಮ ಎಲ್ಲರಿಗೂ ಅನ್ವಯವಾಗಲಿದೆ. ನಿಯಮ ಪಾಲನೆಯು ಬಿಜೆಪಿ, ಕಾಂಗ್ರೆಸ್, ಜನತಾದಳ ಎಲ್ಲದಕ್ಕೂ ಅನ್ವಯವಾಗುತ್ತದೆ ಎಂದರು.

ಮೈಸೂರು, ಚಾಮರಾಜನಗರ ಗಡಿಗಳಲ್ಲಿ ಸ್ಟ್ರಿಕ್ಟ್ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಹಲವೆಡೆ ಕಾಣಿಸಿಕೊಂಡಿದೆ. ದೇಶಾದ್ಯಂತ ಹರಡಿಕೊಂಡಿದೆ. ವಿದೇಶದಿಂದ ಬರುವವರ ಮೇಲೆ ಕಣ್ಣಿಡಲಾಗಿದೆ. ಸ್ವತಃ ಜಿಲ್ಲಾಧಿಕಾರಿಗಳು ಗಡಿಯಲ್ಲಿ ಕಾಯುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವ ನರ್ಸಿಂಗ್ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಾಗಿದೆ. ಲಾಕ್ ಡೌನ್ ಮಾಡುವ ಪ್ರಸಂಗ ಬಂದಿಲ್ಲ ಎಂದರು.

ಮುರುಗೇಶ್ ನಿರಾಣಿ ಸಿಎಂ ಆಗಲಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರೂ ತಿರುಕನ ಕನಸು ಕಾಣುವುದು ಬೇಡ. ನಮ್ಮ ಕೇಂದ್ರದ ನಾಯಕ ಮೋದಿ, ಅಮಿತ್ ಶಾ ಅವರು ತೀರ್ಮಾನದಂತೆ ಸಿಎಂ‌ ಆಗಿ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಇದನ್ನು ನಮ್ಮ ವರಿಷ್ಠರೇ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

ಜನ ಸಂಕಷ್ಟ ಸಂದರ್ಭದಲ್ಲಿ ಜನರ ಧ್ವನಿಯಾಗಿ ಸ್ಪಂದನೆ ಮಾಡಬೇಕು. ಬೊಮ್ಮಾಯಿಗೆ ಕಾಮನ್ ಸಿಎಂ ಅಂತ ಹೆಸರಿದೆ. ಈಗ ಬಂದಿರೋ ಎಲ್ಲಾ ಸಂಕಷ್ಟಗಳನ್ನ ಒಳ್ಳೆಯ ರೀತಿ ಕೆಲಸ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗುವುದು. ಈಶ್ವರಪ್ಪ ತಮಾಷೆಯಾಗಿ ಹೇಳಿದ್ದಾರೆ ಎಂದರು.

ಅಶೋಕ್ ಸಿಎಂ ಆಗುವುದಿಲ್ಲವೇ ಎಂಬ ವಿಚಾರಕ್ಕೆ ಮಾತನಾಡಿದ ಅವರು, ರಾಜ್ಯದ ಚುಕ್ಕಾಣಿ ಯಾರು ಹಿಡಿಬೇಕೆಂದು ಜನ ತೀರ್ಮಾನ ಮಾಡುತ್ತಾರೆ. ನಾಯಕರು, ಹಣೆ ಬರಹ ತೀರ್ಮಾನ ಆಗಲಿದೆ. ಈಗ ಬೊಮ್ಮಾಯಿ ಅವರಿಗೆ ಒಲಿದು ಬಂದಿದೆ. ಬಿಸಿಲಿನ ಕುದುರೆ ಮೇಲೆ ಹೋಗಬಾರದು ಎಂದರು

Gayathri SG

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

12 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

14 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

34 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

46 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

56 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago