ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು ಹೆಚ್ಚು ಪ್ರಕರಣಗಳು ಕಂಡುಬರುತ್ತಿರುವ ಬಿಬಿಎಂಪಿ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯ ಪ್ರಮಾಣ ಇಳಿಕೆಯಾಗುತ್ತಿದ್ದು, ಹೆಚ್ಚು ಪ್ರಕರಣಗಳು ಕಂಡುಬರುತ್ತಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೋವಿಡ್ ಸೋಂಕು ನಿಯಂತ್ರಿಸಬೇಕು ಎಂದು ಪಾಲಿಕೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಸುಮಾರು ಶೇ.30 ರಷ್ಟು ಇಳಿಕೆ ಕಂಡಿದೆ. ಪಾಸಿಟಿವಿಟಿ ಪ್ರಮಾಣವು ಕೂಡಾ ಶೇ 25 ರಿಂದ ಶೇ 17 ರಿಂದ 20ಕ್ಕೆ ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.