ಬೆಳಗಾವಿ: ಕೋವಿಡ್ -19 ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 2.45ಕ್ಕೆ ಸುವರ್ಣ ವಿಧಾನಸೌಧದಲ್ಲಿ ತುರ್ತು ಸಭೆಯನ್ನು ಕರೆದಿದ್ದಾರೆ.
ಕಂದಾಯ ಸಚಿವರು, ಸಾರಿಗೆ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವರು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು, ಸರಕಾರದ ಮುಖ್ಯ ಕಾರ್ಯದರ್ಶಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಸಹಿತ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ಕೋವಿಡ್ -19 ರೂಪಾಂತರ ತಳಿ ಒಮಿಕ್ರಾನ್ ಹಬ್ಬುತ್ತಿರುವುದು ಸೇರಿದಂತೆ ಕೋವಿಡ್ ನಿಯಂತ್ರಣ ಹಾಗೂ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಲಾಗುತ್ತದೆ.