ಬೆಂಗಳೂರು ನಗರ

ಕೋವಿಡ್-19 : ಹಾಸ್ಟೆಲ್ ಮತ್ತು ಕ್ಲಸ್ಟರ್‌ಗಳ ನಿರ್ವಹಣೆಗೆ ವಿಶೇಷ ಮಾರ್ಗಸೂಚಿ

ಬೆಂಗಳೂರು: ಕೋವಿಡ್-19, ಹೊಸ ರೂಪಾಂತರ ಒಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ತಜ್ಞರು ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ. ಈಗಿರುವ ಪರಿಸ್ಥಿತಿ ಗಮನಿಸಿದರೆ ಗಾಬರಿಯಾಗಬೇಕಿಲ್ಲ. ಹಾಸ್ಟೆಲ್ ಮತ್ತು ಕ್ಲಸ್ಟರ್‌ಗಳ ನಿರ್ವಹಣೆಗೆ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತಜ್ಞರ ತಂಡದೊಂದಿಗೆ ಮಾತನಾಡಿದ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಅಲ್ಲಲ್ಲಿರುವ ಹಾಸ್ಟೆಲ್‌ಗಳ ನಿರ್ವಹಣೆಗೆ ಈಗಿರುವ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಪುನರ್ ಪರಿಷ್ಕರಿಸಿ ನೀಡಲಾಗುತ್ತದೆ. ಹಾಸ್ಟೆಲ್ ನಿಭಾಯಿಸುವುದು, ಎರಡು ದಿನಗಳಿಗೊಮ್ಮೆ ಸ್ಯಾನಿಟೈಸ್ ಮಾಡುವುದು, ವಿದ್ಯಾರ್ಥಿಗಳು ಊಟ ನೀಡುವ ವೇಳೆ ಒಂದೇ ಸಲ ಬರದಂತೆ ವಿಭಾಗಿಸುವುದು, ಸಂದರ್ಶಕರಿಗೆ ನಿರ್ಬಂಧ, ಅಡುಗೆಯವರ ಸಹಿತ ಎಲ್ಲ ಸಿಬ್ಬಂದಿಗೆ ಕೋವಿಡ್ ಎರಡೂ ಲಸಿಕೆ ನೀಡುವುದು. ಐಸೋಲೇಶನ್ ಕೊಠಡಿ ಮಾಡುವುದು ಇತ್ಯಾದಿಗಳನ್ನು ಅದು ಒಳಗೊಂಡಿರುತ್ತದೆ. ಇದೇ ರೀತಿಯ ಎಸ್‌ಒಪಿ ಕ್ಲಸ್ಟರ್ ನಿರ್ವಹಣೆಗೂ ನೀಡಲಾಗುತ್ತದೆ ಎಂದರು.

ಇದಲ್ಲದೇ ಕೋವಿಡ್ ಲಸಿಕೆ ನೀಡುವುದಕ್ಕೆ ಈ ಹಿಂದಿನಂತೆ ವಿಶೇಷ ಅಭಿಯಾನಗಳನ್ನು ಮಾಡುವುದಕ್ಕೆ ಸಚಿವ ಸಂಪುಟ ಸಲಹೆ ಮಾಡಿದೆ. ಅದನ್ನು ಮುಂದುವರಿಸಲು ಕ್ರಮಕೈಗೊಳ್ಳಲಾಗುತ್ತದೆ. ಇದಲ್ಲದೇ ರಾಜ್ಯದ ಗಡಿಭಾಗದಲ್ಲಿರುವ ಕೋವಿಡ್ ಕಟ್ಟೆಚ್ಚರ ಮುಂದುವರಿಯುತ್ತದೆ. ಜೊತೆಗೆ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಇರುವ ಎಲ್ಲ ನಿಬಂಧನೆಗಳು ಕೂಡ ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

17 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

35 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

56 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago