ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾದ ಸುಟ್ಟ ಗಾಯಗಳಿಂದ ರಕ್ಷಿಸಲ್ಪಟ್ಟು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಗ್ರೂಪ್ ಕಮಾಂಡರ್ ಕ್ಯಾ.ವರುಣ್ ಸಿಂಗ್ ಬುಧವಾರ(ಡಿಸೆಂಬರ್ 15) ಕೊನೆಯುಸಿರೆಳೆದಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ಗ್ರೂಪ್ ಕಮಾಂಡರ್ ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿರುವುದಾಗಿ ವರದಿ ತಿಳಿಸಿದೆ.

ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಇತರ 12 ಮಂದಿ ತಮಿಳುನಾಡಿನಲ್ಲಿ ಸಂಭವಿಸಿದ್ದ ಭೀಕರ ದುರಂತದಲ್ಲಿ ವಿಧಿವಶರಾಗಿದ್ದು, ದುರಂತದಲ್ಲಿ ಬದುಕುಳಿದ ಏಕೈಕ ಗಾಯಾಳು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಸುಟ್ಟ ಗಾಯದಿಂದ ಬಳಲುತ್ತಿರುವ ಪೈಲಟ್ ಕ್ಯಾ.ವರುಣ್ ಸಿಂಗ್ ಅವರನ್ನು ವೆಲ್ಲಿಂಗ್ಟನ್ ನ ಮಿಲಿಟರಿ ಆಸ್ಪತ್ರೆಯಿಂದ ಆಯಂಬುಲೆನ್ಸ್ ನಲ್ಲಿ ಸೂಲೂರು ವಾಯುನೆಲೆಗೆ ತರಲಾಗಿದ್ದು, ಅಲ್ಲಿಂದ ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

ಡಿಸೆಂಬರ್ 8ರಂದು ನಡೆದಿದ್ದ ದುರಂತದಲ್ಲಿ ಮೂರು ಸೇನೆಯ ಮಹಾದಂಡನಾಯಕ ಜ.ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಆದರೆ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಗಂಭೀರವಾದ ಸುಟ್ಟ ಗಾಯಗಳಿಂದ ಬದುಕುಳಿದಿದ್ದ ಏಕೈಕ ಸಾಕ್ಷಿಯಾಗಿದ್ದರು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಇಂದು ಸಿಂಗ್ ವಿಧಿವಶರಾಗಿದ್ದಾರೆ. ಇದರೊಂದಿಗೆ ಹೆಲಿಕಾಪ್ಟರ್ ದುರಂತದಲ್ಲಿ ಎಲ್ಲಾ 14 ಮಂದಿಯೂ ಮಡಿದಂತಾಗಿದೆ.

ಪ್ರಧಾನಿ ಮೋದಿ ಸಂತಾಪ:

ಕ್ಯಾಪ್ಟನ್ ವರುಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ವರುಣ್ ಸಿಂಗ್ ಸೇವೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Gayathri SG

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

14 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

18 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

42 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

50 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

56 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

1 hour ago