News Karnataka Kannada
Friday, May 03 2024
ಬೆಂಗಳೂರು ನಗರ

ಕ್ರೀಡಾ ಸಂಘ ಸಂಸ್ಥೆಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ

Narayana Gowda
Photo Credit : News Kannada

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಜೆಟ್ ಸಭೆ ಹಿನ್ನೆಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ ಹಲವು ಸಂಘ ಸಂಸ್ಥೆಗಳ ಜೊತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಪೂರ್ವಭಾವಿ ಸಭೆ ನಡೆಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಉತ್ತಮ ಶಕ್ತಿ ತುಂಬಬೇಕು ಎಂಬ ಕನಸನ್ನು ಸಚಿವ ಡಾ.ನಾರಾಯಣ ಗೌಡ ಅವರು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಇಲಾಖೆಯಲ್ಲಿ ಕೈಗೊಳ್ಳಬೇಕಾದ ಹೊಸ ಕಾರ್ಯಕ್ರಮಗಳು, ರೂಪಿಸಬೇಕಾದ ಯೋಜನೆಗಳು, ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಅಭಿಪ್ರಾಯಗಳನ್ನು ಸ್ವೀಕರಿಸಿದ್ದಾರೆ.

ಬಜೆಟ್ ಹಿನ್ನೆಲೆಯಲ್ಲಿ ಸಲಹೆ, ಅಭಿಪ್ರಾಯ ಕೇಳಲು ಸಭೆ ಕರೆದಿರುವುದಕ್ಕೆ ಯುವ ಮತ್ತು ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಮೊದಲ ಬಾರಿಗೆ ಸಚಿವರೊಬ್ಬರು ಈ ರೀತಿಯ ಸಲಹೆ, ಅಭಿಪ್ರಾಯ ಕೇಳುತ್ತಿರುವುದು ಸಂತಸವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಇದರ ಜೊತೆಗೆ ಕಡಿಮೆ ಬಜೆಟ್‍ ನಲ್ಲೂ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಲಾಗುತ್ತಿದೆ. ನಾಲ್ಕು ವರ್ಷದಿಂದ ಸ್ಥಗಿತಗೊಂಡಿದ್ದ ಜಕ್ಕೂರು ವೈಮಾನಿಕ ತರಬೇತ ಶಾಲೆಯನ್ನು ಆರಂಭ, ಸಿದ್ದಿ ಮಕ್ಕಳಿಗೆ ತರಬೇತಿ ನೀಡುತ್ತಿರುವುದು, ಅಮೃತ ಕ್ರೀಡಾ ದತ್ತು ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸುವ ಇಲಾಖೆಗೆ ಜೀವ ತುಂಬಲಾಗಿದೆ. ಈ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಮತ್ತಷ್ಟು ಶಕ್ತಿ ತುಂಬಬೇಕು ಎಂದು ಹೇಳಿದರು.

ಯುವ ಸಂಘಟನೆಗಳು, ಕ್ರೀಡಾ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಇವತ್ತಿನ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ತಿಳಿಸಿ, ಹಲವು ಸಲಹೆಗಳನ್ನು ನೀಡಿದ್ದಾರೆ. ಇದರ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಮಗ್ರವಾಗಿ ಚರ್ಚಿಸಿ, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ನಾನು ಸಚಿವನಾದ ಮೇಲೆ ಇಲಾಖೆಯಲ್ಲಿ ಹಲವು ಹೊಸ ಹೊಸ ಯೋಜನೆಗಳನ್ನು ರೂಪಿಸಿ, ಇಲಾಖೆಯಲ್ಲಿ ಹೊಸತನ ಮೂಡಿಸಲಾಗುತ್ತಿದೆ. ಮುಂದಿನ ಬಜೆಟ್ ನಲ್ಲೂ ಉತ್ತಮ ಯೋಜನೆಗಳನ್ನು ರೂಪಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಈ ಬಾರಿಯ ಬಜೆಟ್ನಲ್ಲಿ ಕ್ರೀಡಾ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು