ಬೆಂಗಳೂರು: ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಾದ ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
1996ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಕಣವಿ ಅವರು ಸಾಹಿತ್ಯ ಲೋಕದಲ್ಲಿ ಸಲ್ಲಿಸಿದ್ದ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ,ನಾಡೋಜ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪುರಸ್ಕಾರಗಳು ಅವರ ಮುಕುಟ ಅಲಂಕರಿಸಿದ್ದವು ಎಂದು ಶಿವಕುಮಾರ್ ಅವರು ಸ್ಮರಿಸಿದ್ದಾರೆ.
ಕಣವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು, ಬಂಧುಗಳು ಹಾಗೂ ಸಾಹಿತ್ಯ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.