ಬೆಂಗಳೂರು ನಗರ

ಖ್ಯಾತ ಪೋಷಕ ನಟ ‘ಕಲಾತಪಸ್ವಿ’ ರಾಜೇಶ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟ ‘ಕಲಾ ತಪಸ್ವಿ’ ರಾಜೇಶ್ ಅವರು ಶನಿವಾರ (ಫೆ.19)​ ಮುಂಜಾನೆ ನಿಧನರಾಗಿದ್ದು, ಕನ್ನಡ ಚಿತ್ರರಂಗ ಮತ್ತೊಬ್ಬ ಕಲಾವಿದನನ್ನು ಕಳೆದುಕೊಂಡಂತಾಗಿದೆ.ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ರಾಜೇಶ್​​ ಅವರಿಗೆ ವೆಂಟಿಲೇಟರ್​ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರನ್ನು ಬದುಕಿಸಿಕೊಳ್ಳಲಾಗಲಿಲ್ಲ ಎಂಬುದು ನೋವಿನ ಸಂಗತಿ.

ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿ ಆಗದೇ ರಾಜೇಶ್ ಮೃತರಾಗಿದ್ದು, ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ರಾಜೇಶ್ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ಅಭಿಮಾನಿಗಳು ಮತ್ತು ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ. ರಾಜೇಶ್​ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಶನಿವಾರ ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Swathi MG

Recent Posts

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

19 seconds ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

15 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

32 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

1 hour ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago