ಬೆಂಗಳೂರು : ರಾಜ್ಯ ಸರಕಾರ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ನಿರ್ಧರಿಸಿದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವರ್ಷದಿಂದ ವರ್ಷಕ್ಕೆ ಗೋವುಗಳ ಸಂಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷ ಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾಗಬೆಕಾಗಿದೆ. ಆದರೂ, ವಿಧಾನಸಭೆಯಲ್ಲಿ ಅಂಗೀಕಾರವಾಗಿ ಪರಿಷತ್ ನಲ್ಲಿ ಅವಕಾಶ ಸಿಗದ ಕಾರಣ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.