ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಗುರುತು ಪತ್ತೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ಕೃತ್ಯವನ್ನು ಸಾಬೀತು ಮಾಡಲು ಹೆಚ್ಚಿನ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೇಳಿದೆ.

ಆಂಗ್ಲ ಸುದ್ದಿವಾಹಿನಿಯೊಂದಕ್ಕೆ ಮಾಹಿತಿ ನೀಡಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು, ಈ ಕೃತ್ಯ ಎಸಗಿರುವವರು ಯಾರು ಎನ್ನುವುದು ನಮಗೆ ತಿಳಿದಿದೆ. ಆದರೆ ಹೆಚ್ಚಿನ ಮಾಹಿತಿ ನೀಡುವುದರಿಂದ ತನಿಖೆಗೆ ತೊಂದರೆಯಾಗಬಹುದು ಎಂದು ಅವರು ತಿಳಿಸಿದರು.

ಕಳೆದ ತಿಂಗಳು ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಮನೆಯ ಸಮೀಪವೇ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ದುಷ್ಕರ್ಮಿಯೊಬ್ಬ ತನ್ನ ಮುಖ ಮುಚ್ಚಲು ಹೆಲ್ಮೆಟ್ ಧರಿಸಿದ್ದ. ಇದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೂ ಇದುವರೆಗೆ ದುಷ್ಕರ್ಮಿಗಳ ಪತ್ತೆ ಮಾಡಲು ಸಾಧ್ಯವಾಗದಿರುವ ಕಾರಣ ರಾಜ್ಯ ಸರ್ಕಾರವು ಮುಜುಗರಕ್ಕೆ ಒಳಗಾಗಿದೆ.

2015ರಲ್ಲಿ ಧಾರವಾಡದಲ್ಲಿ ಹತ್ಯೆಯಾದ ಬುದ್ಧಿಜೀವಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಮತ್ತು ಗೌರಿ ಹತ್ಯೆಗೆ ಸಾಮ್ಯತೆಯಿದೆ ಎಂದು ತನಿಖಾಧಿಕಾರಿಗಳು ಹೇಳುತ್ತಿದ್ದಾರೆ. ಪತ್ರಕರ್ತೆ ಹಾಗು ಬುದ್ಧಿಜೀವಿಯಾಗಿದ್ದ ಗೌರಿ ಲಂಕೇಶ್ ಅವರು ಬಲಪಂಥೀಯ ಸಂಘಟನೆಗಳ ವಿರೋಧ ಕಟ್ಟಿಕೊಂಡಿದ್ದರು.

ಕಲ್ಬುರ್ಗಿ ಅವರ ಹತ್ಯೆಗೆ ಬಳಸಿದ ಗುಂಡುಗಳ ಮೂಲ ಕಂಡುಹಿಡಿಯಲು ಅವುಗಳನ್ನು ಸ್ಕಾಟ್ ಲೆಂಡ್ ಯಾರ್ಡ್ ಗೆ ಕಳುಹಿಸಿಕೊಡಲಾಗಿದೆ. ಆದರೆ ಇದುವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ಸಿಕ್ಕಿಲ್ಲ. ಗುಂಡುಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಎರಡು ಹತ್ಯೆಗಳ ಸಂಪರ್ಕ ತಿಳಿದುಬರುವುದು ಎಂದು ತನಿಖಾಧಿಕಾರಿಗಳು ಹೇಳುತ್ತಿದ್ದಾರೆ.

ಗೌರಿ ಲಂಕೇಶ್ ಹತ್ಯೆಯನ್ನು ಟ್ವಿಟ್ಟರ್ ನಲ್ಲಿ ಬಿಜೆಪಿ ಬೆಂಬಲಿಗರು ಸಂಭ್ರಮಿಸಿದ್ದಾರೆ ಎನ್ನುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇವುಗಳಲ್ಲಿನ ಕೆಲವು ಖಾತೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫಾಲೋ ಮಾಡುತ್ತಿದ್ದಾರೆ. ಇದರ ಬಗ್ಗೆ ಟೀಕೆ ವ್ಯಕ್ತವಾದರೂ ಫಾಲೋ ಮಾಡುವುದನ್ನು ನಿಲ್ಲಿಸಿಲ್ಲ.

ಮೋದಿ ಅವರು ಹತ್ಯೆಯ ಬಗ್ಗೆ ಮೌನವಾಗಿರುವುದು ತುಂಬಾ ಚಿಂತೆಯುಂಟು ಮಾಡಿದೆ ಎಂದು ದಕ್ಷಿಣ ಭಾರತದ ಜನಪ್ರಿಯ ನಟ ಪ್ರಕಾಶ್ ರೈ ಹೇಳಿದ್ದಾರೆ.

ನನಗೆ ಸಿಕ್ಕಿರುವ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರಧಾನಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಟನೆಗೆ ನೀಡಬೇಕು ಎಂದು ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ.

Desk

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

7 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

7 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

7 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

8 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

8 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

9 hours ago