ಬೆಂಗಳೂರು ನಗರ

ಗ್ರಾಹಕರಿಗೆ ಬಿಗ್ ಶಾಕ್: ತರಕಾರಿ ಬೆಲೆ ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೋ, ಈರುಳ್ಳಿ, ಬೀನ್ಸ್  ಸೇರಿದಂತೆ ತರಕಾರಿ ಬೆಲೆಯಲ್ಲಿ  ಹೆಚ್ಚಳವಾಗಿದೆ.

ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ನುಗ್ಗೇಕಾಯಿ ಕೆಜಿಗೆ ಬರೋಬ್ಬರಿ 30 ರೂ. ನಿಂದ 200 ರೂ. ಗಡಿ ದಾಟಿದೆ. ಹಾಪ್ ಕಾಮ್ಸ್ ನಲ್ಲಿ 350 ರೂ. ಗೆ ಮಾರಾಟವಾಗಿದೆ. ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ನುಗ್ಗೇಕಾಯಿ ಕೆಜಿಗೆ 200 ರೂ. ನಿಂದ 360 ರೂ. ವರೆಗೆ ಇದ್ದರೆ, ಬದನೆಕಾಯಿ 30 ರಿಂದ 110 ರೂ.ವಗೆ ತಲುಪಿದೆ. ಟೊಮೆಟೋ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕೆಜಿ ಟೊಮೆಟೋ ಬೆಲೆ 60 ರೂ.ನಿಂದ 100 ರೂ.ಗೆ ಏರಿಕೆಯಾಗಿದೆ. ಈರುಳ್ಳಿ 40 ರಿಂದ 50 ರೂ. ಬೀನ್ಸ್ 60 ರಿಂದ 100 ರೂ. ಕ್ಯಾರೆಟ್ 70 ರಿಂದ 90 ರೂ. ಹೀರೆಕಾಯಿ 50 ರಿಂದ 85 ರೂ. ಬೀಟ್ರೂಟ್ 40 ರಿಂದ 80 ರೂ. ಇದೆ.

ಇನ್ನು ಸೊಪ್ಪಿನ ಬೆಲೆಯಲ್ಲೂ ಏರಿಕೆಯಾಗಿದ್ದು, ಕೊತ್ತಂಬರಿ ಸೊತ್ತು 30 ರೂ.ನಿಂದ 40 ರೂ. ಇದೆ. ಮೆಂತ್ಯ ಪಾಲಕ್, ದಂಟಿನ ಸೊಪ್ಪಿ, ಅರವೆ ಸೊಪ್ಪು ಪ್ರತಿ ಕಟ್ಟಿಗೆ 60 ರೂ. ರಿಂದ 70 ರೂ.ಗೆ ಏರಿಕೆಯಾಗಿದೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago