ಚಂಡಮಾರುತ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಮೇ 10: ‘ಅಸನಿ’ ಚಂಡಮಾರುತದ ಪರಿಣಾಮ ಒಡಿಶಾ, ಆಂಧ್ರ ಪ್ರದೇಶ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಹ ಮಳೆಯಾಗಬಹುದು ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಂಗಳವಾರ ವಿವಿಧ ಜಿಲ್ಲೆಗಳಲ್ಲೆ ಯೊಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಸನಿ ಚಂಡಮಾರುತ ಆಂಧ್ರ ಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಲಿಸುತ್ತಿದೆ. ಇದರ ಪರಿಣಾಮ ಮೇ 10 ರಿಂದ 12ರ ತನಕ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಅಲರ್ಟ್‌ ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉಳಿದಂತೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

ಬೆಂಗಳೂರು ನಗರದಲ್ಲಿ ಕಳೆದ ವಾರದಿಂದ ಪ್ರತಿದಿನ ಸಂಜೆ ಮಳೆಯಾಗುತ್ತಿದೆ. ಸೋಮವಾರ ರಾತ್ರಿ 9 ಗಂಟೆ ಬಳಿಕ ನಗರದ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago