‘ಚಲಿಸುತ್ತಿದ್ದ ಬಸ್’ನಲ್ಲಿ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉತ್ತರಕನ್ನಡ:  ಮುಂಬೈನಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದಂತ ಖಾಸಗಿ ಬಸ್ ನಲ್ಲಿ ಕಾಣಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಲ್ಲಿ ಹೊತ್ತಿಕೊಂಡ ಬೆಂಕಿ, ಇಡೀ ಬಸ್ ಗೆ ಆವರಿಸೋ ಮುನ್ನಾ, ಚಾಲಕ ಗಮನಿಸಿದ್ದಾನೆ. ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನು ಕೆಳೆಗೆ ಇಳಿಸಿದ ಪರಿಣಾಮ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವಂತ ಘಟನೆ ಉತ್ತರ ಕನ್ನಡದ ಯಲ್ಲಾಪುರ ಸಮೀಪ ನಡೆದಿದೆ.

ಮುಂಬೈನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದಂತ ಖಾಸಗಿ ಬಸ್ ನಲ್ಲಿ ಯಲ್ಲಾಪುರದ ಜೋಡಕೆರೆ ಬಳಿ ಎಂಜಿನ್ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದಂತ ಚಾಲಕ, ಕೂಡಲೇ ಬಸ್ ನನ್ನ ರಸ್ತೆಯ ಪಕ್ಕಕ್ಕೆ ನಿಲ್ಲಿಸಿ, ಕೂಡಲೇ ಅದರಲ್ಲಿದ್ದಂತ ಪ್ರಯಾಣಿಕರಿಗೆ ಮಾಹಿತಿ ನೀಡಿ, ಕೆಳಗೆ ಇಳಿಸಿದ್ದಾರೆ.

ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕ ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಅರ್ಧದಷ್ಟು ಬಸ್ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಬಸ್ ಗೆ ಹೊತ್ತಿಕೊಂಡಿದ್ದಂತ ಬೆಂಕಿಯನ್ನು ನಂದಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದಂತ 24 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Swathi MG

Recent Posts

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

18 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

27 mins ago

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

36 mins ago

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

51 mins ago

ಭಾರೀ ಮಳೆಗೆ ಬೈಕ್​ ಮೇಲೆ ಉರುಳಿ ಬಿದ್ದ ಮರ: ವ್ಯಕ್ತಿ ಮೃತ್ಯು

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…

1 hour ago

ಕಾರಿನ ಮೇಲೆ ಹರಿದ ಲಾರಿ​ : 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.

1 hour ago