ಚಿಂತನೆಯ ಅಭಿವ್ಯಕ್ತಿ ಮಾಧ್ಯಮ ಸಾಹಿತ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು : ಚಿಂತನೆಯ ಅಭಿವ್ಯಕ್ತ ಮಾಧ್ಯಮ ಸಾಹಿತ್ಯವಾಗಿದ್ದು, ಇಂದಿನ ಯುವ ಬರಹಗಾರರು ಅದನ್ನು ಅರ್ಥೈಸಿಕೊಳ್ಳುವ ಅಗತ್ಯವಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಂಗಳೂರಿನ ನಾಗದೇವನಹಳ್ಳಿಯ ಮಾಸ್ತಿ ಭವನದಲ್ಲಿ ಏಪ್ರಿಲ್ 18, 2022ರ ಸೋಮವಾರದಂದು, ಕೋಲಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಮಾಸ್ತಿ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ ಅವರು ಉದ್ಘಾಟನಾ ನುಡಿಗಳನ್ನಾಡಿದರು.

ರಾಜ್ಯ ಅಭಿವೃದ್ಧಿಹೊಂದಲು ಕೇವಲ ಆರ್ಥಿಕ ದೃಷ್ಟಿಕೋನ ಸಾಲದು. ಸಾಹಿತ್ಯ, ಸಾಮಾಜಿಕ, ಶೈಕ್ಷಣಿಕ, ಮೌಲಿಕ ಹಾಗೂ ಆರ್ಥಿಕ, ಹೀಗೆ ಎಲ್ಲ ಆಯಾಮಗಳಲ್ಲಿ ಅಭಿವೃದ್ಧಿ ಹೊಂದಬೇಕಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಶ್ರೀಮಂತವಾಗಿದೆ. ಮಾಸ್ತಿ, ಕುವೆಂಪು, ಬೆಂದ್ರೆಯವರಂತಹ ಹಿರಿಯ ಸಾಹಿತಿಗಳು ಮಾಡಿರುವ ಸಾಹಿತ್ಯ ಕೃಷಿ ಮುಂದಿನ ಪೀಳಿಗೆಗೂ ಮುಂದುವರಿಯುವ ಅಗತ್ಯತೆಯಿದೆ ಎಂದು ಅವರು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಮಾನ್ಯ ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಮಾತನಾಡಿ, ಕನ್ನಡದ ಹೆಮ್ಮೆಯ ಸಾಹಿತಿಗಳು ಮಾಸ್ತಿ ವೆಂಕಟೇಶ ಅಯ್ಯಂಗಾರ್, ಅವರ ಹೆಸರಿನಲ್ಲಿ ಕಟ್ಟಡ ನಿರ್ಮಾಣವಾಗುತ್ತಿರುವುದು ಸಂಭ್ರಮದ ವಿಚಾರ. ನಿರ್ಮಾಣದ ಪ್ರತಿ ಹಂತದಲ್ಲೂ ಸರ್ಕಾರ ಸಹಕಾರ ನೀಡಲಿದೆ ಎಂಬ ಭರವಸೆಯ ಮಾತುಗಳನ್ನಾಡಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಡಾ. ಚಂದ್ರಶೇಖರ ಕಂಬಾರ ಅವರ ಗೌರವ ಉಪಸ್ಥಿತಿ ಕಾರ್ಯಕ್ರಮದಲ್ಲಿತ್ತು. ನಂತರ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಕ್ಕೂ ಸರ್ಕಾರಕ್ಕೂ ಇರುವ ಗಟ್ಟಿ ಸಂಬಂಧ ಬೇರೆ ಯಾವ ರಾಜ್ಯದಲ್ಲೂ ಕಾಣುವ ಕಷ್ಟಸಾಧ್ಯವಾಗಿದೆ. ಕನ್ನಡವನ್ನು ಪ್ರೋತ್ಸಾಹಿಸಲು, ಅಕಾಡಮಿಗಳು, ಸಂಸ್ಕೃತಿ ಇಲಾಖೆಗಳೂ ಇವೆ. ಮಾಸ್ತಿ ಅವರ ಹೆಸರಿನಲ್ಲಿ ಭವನ ನಿರ್ಮಿಸಿ, ಕನ್ನಡ ಸಾಹಿತ್ಯ ಅಧ್ಯಯನಕ್ಕೆ ಮತ್ತಷ್ಟು ಅವಕಾಶ ಮಾಡಿಕೊಟ್ಟಿರುವುದು ಶ್ಲಾಘನೀಯವಾಗಿದೆ ಎಂದರು.

ಮಾಸ್ತಿ ಟ್ರಸ್ಟ್ ನ ಅಧ್ಯಕ್ಷರು ಮಾವಿನ ಕೆರೆ ರಂಗನಾಥ್ ಅವರು ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳನ್ನಾಡಿದರು. ಕವಿ ಬಿ.ಆರ್ ಲಕ್ಷಣ್ ರಾವ್ ಅವರು ವಂದಿಸಿದರು. ಲೇಖಕ ಎಚ್.ಎಸ್. ಸತ್ಯನಾರಾಯಣ ಅವರು ನಿರೂಪಿಸಿದರು.

ಬುಕ್ ಬ್ರಹ್ಮ ಫೇಸ್ ಬುಕ್ ಹಾಗೂ ಯೂ ಟ್ಯೂಬ್ ಪೇಜ್ ನಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರಗೊಂಡಿದೆ.

ಯೂಟ್ಯೂಬ್ ಲಿಂಕ್ :- https://www.youtube.com/watch?v=uM_lj3uEG9U

ಫೇಸ್ ಬುಕ್ ಲಿಂಕ್ :- https://www.facebook.com/BookBrahmaKannada/videos/493284159093706

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

5 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago