ಬೆಂಗಳೂರು ನಗರ

ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಜಗಜೀವನ್ ರಾಂ ಅವರದ್ದು ಅಪರೂಪದ ನಾಯಕತ್ವ ಹಾಗೂ ವ್ಯಕ್ತಿತ್ವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬು ಜಗಜೀವನ್ ರಾಂ ಅವರ 115ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದರು.

ಬಿಹಾರದ ಕಡುಬಡತನದ ಮನೆತನದಲ್ಲಿ ಹುಟ್ಟಿ, ಬಹಳಷ್ಟು ಅವಮಾನ, ಅಪಮಾನಗಳನ್ನು ಸಹಿಸಿಕೊಂಡು ಬೆಳೆದ ಅವರು ಮುಂದೆ ಭಾರತನ ಉಪಪ್ರಧಾನಿಯಾಗಿ ಬೆಳೆದರು. ನೋವುಂಡರೂ ಅಧಿಕಾರ ಬಂದಾಗ ಸಮಸ್ತ ಭಾರತದ ಕಲ್ಪನೆಯಲ್ಲಿ ಕೆಲಸ ಮಾಡಿದರು. ಅವರಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ ಸ್ವತಂತ್ರ ಪೂರ್ವದ ನಾಯಕ ಎಂದು ಹೇಳಿದರು.

ದೀನದಲಿತರ ಅಭಿಮಾನದ, ಸ್ವಾಭಿಮಾನದ ಸಂಕೇತ
ದೀನದಲಿತರ ಧ್ವನಿಯಾಗಿ ಅವರಿಗೆ ನ್ಯಾಯ ಒದಗಿಸಲು ಅವರು ಪಟ್ಟ ಪರಿಶ್ರಮ ದೊಡ್ಡದು. ದೀನದಲಿತರ ಅಭಿಮಾನದ, ಸ್ವಾಭಿಮಾನದ ಸಂಕೇತವಾಗಿದ್ದರು. ಕೃಷಿ ಸಚಿವರಾಗಿ ಅವರು ಮಾಡಿದ ಹಸಿರು ಕ್ರಾಂತಿ ಭಾರತ ದೇಶವನ್ನು ಸ್ವಾಭಿಮಾನಿ ರಾಷ್ಟ್ರವನ್ನಾಗಿ ಬೆಳೆಸಿದೆ. ಒಂದು ಕಾಲದಲ್ಲಿ ವಿದೇಶದಿಂದ ಆಹಾರ ಧ್ಯಾನಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ವಿಜ್ಞಾನದಿಂದ ಹಸಿರು ಕ್ರಾಂತಿಯಾಗಿ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾದ ಮೇಲೆ ನಮ್ಮದು ಸ್ವಾವಲಂಬಿ ದೇಶವಾಗಿದೆ. ಅದಕ್ಕೆ ಜಗಜೀವನ್ ರಾಮ್ ಅವರೇ ಕಾರಣೀಭೂತರು. ರಕ್ಷಣಾ ಮಂತ್ರಿಯಾಗಿ ರಾಷ್ಟ್ರದ ಸುರಕ್ಷತೆಗಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿಯೂ ಪ್ರಸಿದ್ದಿ ಪಡೆದಿದ್ದರು. ಅವರ ವಿಚಾರಗಳು ನಮಗೆ ಪ್ರೇರಣೆ. ಅವರ ತತ್ವ ಆದರ್ಶಗಳನ್ನು ಇಟ್ಟುಕೊಂಡು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡುವ ಮೂಲಕ ಜಗಜೀವನ್ ರಾಂ ಅವರಿಗೆ ನಿಜವಾದ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇವೆ. ದಲಿತರ ಪ್ರೇರಣಾ ದಿನ ಎಂದು ಭಾವಿಸಿ ನಾವು ಕೆಲಸ ಮಾಡಬೇಕು ಎಂದರು.

Sneha Gowda

Recent Posts

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

10 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

28 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

38 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

51 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

11 hours ago