ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಕೆ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ತಜ್ಞರು, ಸಚಿವರು, ಅಧಿಕಾರಿಯಾಗಳು ಭಾಗಿಯಾಗಲಿದ್ದಾರೆ. ಎಲ್ಲರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ ಬಸವರಾಜ ಬೊಮ್ಮಾಯಿ ವೈಜ್ಞಾನಿಕವಾಗಿ ನಿರ್ಧಾರ ಮಾಡಲಿದ್ದಾರೆ ಎಂದರು.
ಜನರ ಜೀವ ಮತ್ತು ಜೀವನ ಕಾಪಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ತಜ್ಞರು ಈಗಾಗಲೇ ವರದಿ ನೀಡಿದ್ದಾರೆ. ಕೊರೊನಾ ಸೋಂಕು ಈ ತಿಂಗಳ ಅಂತ್ಯ ಅಥವಾ ಫೆಬ್ರವರಿಯಲ್ಲಿ ಪೀಕ್ ಗೆ ಬರಬಹುದು ಎಂದು ಹೇಳಿದ್ದಾರೆ.