ಜನವರಿ 8 ಮತ್ತು 9ರಂದು ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ

ಬೆಂಗಳೂರು, ಡಿ. 27; ಕೇಂದ್ರ ಗೃಹ ಸಚಿವ, ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 8 ಮತ್ತು 9ರಂದು ಎರಡು ದಿನಗಳ ಕಾಲ ಅವರು ರಾಜ್ಯದಲ್ಲಿ ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗಿದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮಾತ್ರ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಜನವರಿ 8ರಂದು ಬೆಂಗಳೂರಿಗೆ ಆಗಮಿಸುವ ಅವರು ವಿವಿಧ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಅಮಿತ್ ಶಾ ರಾಜ್ಯ ಪ್ರವಾಸದ ವೇಳೆಯಲ್ಲಿ ಪಕ್ಷದ ಪದಾಧಿಕಾರಿಗಳು, ಶಾಸಕರು, ಸಚಿವರು ಬೆಂಗಳೂರಿನಲ್ಲಿಯೇ ಇರಬೇಕು ಎಂದು ಪಕ್ಷ ಸೂಚನೆ ನೀಡುವ ಸಾಧ್ಯತೆ ಇದೆ. ಮುಂದಿನ ಚುನಾವಣೆ ಸಿದ್ಧತೆಗಳ ಕುರಿತು ಅಮಿತ್ ಶಾ ಹಲವು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ಮೊದಲ ಭೇಟಿ: ಜುಲೈ 26ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಜುಲೈ 28ರಂದು ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಬಳಿಕ ಹೊಸ ಸಚಿವ ಸಂಪುಟ ರಚನೆಯಾಗಿತ್ತು.

ಆಗ ಅಮಿತ್ ಶಾ ದಾವಣಗೆರೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಪಕ್ಷದ ಸಭೆಗಾಗಿಯೇ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅದರಲ್ಲೂ 2023ರ ಚುನಾವಣೆ ಸಿದ್ಧತೆಗಳ ಕುರಿತು ಚರ್ಚೆ ನಡೆಸಲು ಅಮಿತ್ ಶಾ ಮೊದಲ ಬಾರಿಗೆ ರಾಜ್ಯ ಪ್ರವಾಸಸ ಮಾಡುತ್ತಿದ್ದಾರೆ.

ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂಬ ಸುದ್ದಿಗಳು ಹಬ್ಬಿವೆ. ಹಿರಿಯ ನಾಯಕರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿಯೇ ಅಮಿತ್‌ ಶಾ ರಾಜ್ಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

2023ರ ವಿಧಾನಸಭೆ ಚುನಾವಣೆ ಸಿದ್ದತೆಯ ಕುರಿತು ಸಮಾಲೋಚನಾ ಸಭೆ ನಡೆಯಲಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಅಮಿತ್ ಶಾ ಈ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಜನವರಿ 9ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಣಿ ಡಿಸೆಂಬರ್ 28 ಮತ್ತು 29ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ, ಮುಂದೆ ಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆಯೂ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಹಲವು ಪದಾಧಿಕಾರಿಗಳ ನೇಮಕ ಕರ್ನಾಟಕ ಬಿಜೆಪಿ ಭಾನುವಾರ ಪಕ್ಷ ಸಂಘಟನೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಹಲವು ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸಬರನ್ನು ನೇಮಕ ಮಾಡಲಾಗಿದೆ.

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಹೊಸ ಸಂಪುಟ ರಚನೆಯಾದಾಗ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈ ತಪ್ಪಿತ್ತು.

ನಯನಾ ಗಣೇಶ್ ಅವರನ್ನು ಸಹ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಉಪಾಧ್ಯಕ್ಷರ ಸಂಖ್ಯೆ ಈಗ 12ಕ್ಕೆ ಏರಿಕೆಯಾಗಿದೆ. ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರನ್ನು ಅನಿವಾಸಿ ಭಾರತೀಯ ವಿಭಾಗದ ಸಂಚಾಲಕರಾಗಿ ನೇಮಕ ಮಾಡಲಾಗಿದೆ. ರಾಜ್ಯ ವಕ್ತಾರರಾಗಿ ಮೈಸೂರಿನ ಎಂ. ಜಿ. ಮಹೇಶ್ ನೇಮಕಗೊಂಡಿದ್ದಾರೆ.

ಜಿಲ್ಲಾ ಪ್ರಭಾರಿಗಳಾಗಿ ಮಂಡ್ಯ (ಜಗದೀಶ ಹಿರೇಮನಿ), ಯಾದಗಿರಿ (ಅಮರನಾಥ ಪಾಟೀಲ), ದಾವಣಗೆರೆ ( ಕೆ. ಶಿವಲಿಂಗಪ್ಪ), ಚಿತ್ರದುರ್ಗ (ಸಿ. ಆರ್. ಪ್ರೇಮಕುಮಾರ್), ಬೆಂಗಳೂರು ಉತ್ತರ (ಕೆ. ವಿ. ಶಿವಪ್ಪ), ಬಳ್ಳಾರಿ (ಮುರಹರ ಗೌಡ), ವಿಜಯನಗರ (ಚನ್ನಬಸವಗೌಡ) ನೇಮಕ ಮಾಡಲಾಗಿದೆ.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

51 seconds ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

17 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

33 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

53 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago