News Karnataka Kannada
Thursday, May 02 2024
ಬೆಂಗಳೂರು ನಗರ

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ನೀಟ್‌ ವಿರುದ್ಧ ನಿರ್ಣಯ: ಎಚ್. ಡಿ. ಕುಮಾರಸ್ವಾಮಿ

Kumaraswamy
Photo Credit : News Kannada

ಬೆಂಗಳೂರು: ವೈದ್ಯ ಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ನೀಟ್ ಪರೀಕ್ಷೆ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು.

ಗುರುವಾರ ಅವರು ಮತ್ತೆ ನೀಟ್ ಪರೀಕ್ಷೆ ಬಗ್ಗೆ ಸರಣಿ ಟ್ವೀಟ್‌ ಮಾಡಿದ್ದಾರೆ. ‘2023ರಲ್ಲಿ ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ.

ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿ, ‘ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ’ ಎಂದು ಭರವಸೆ ನೀಡಿದ್ದಾರೆ.

ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಹೋಗಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬಗ್ಗೆ ಪುನಃ ಚರ್ಚೆಗಳು ಆರಂಭವಾಗಿವೆ.

ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲೇ ಏಕೆ ವೈದ್ಯಕೀಯ ಶಿಕ್ಷಣ ಸಾಧ್ಯವಾಗುತ್ತಿಲ್ಲ? ಎಂಬ ಪ್ರಶ್ನೆ ಎದ್ದಿದೆ.

‘ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ’ ಎಂದು ಎಚ್. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು