News Karnataka Kannada
Thursday, May 02 2024
ಬೆಂಗಳೂರು ನಗರ

ಜ. 1 ರಿಂದ ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’: ಕೇಂದ್ರದಿಂದ ಸೂಚನೆ

Suryanamaskara
Photo Credit :

ಬೆಂಗಳೂರು: ಜನವರಿ 1 ರಿಂದ ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಹಮ್ಮಿಕೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸೂಚನೆ ನೀಡಲಾಗಿದೆ.ಜನವರಿ 1 ರಿಂದ ಫೆಬ್ರವರಿ 7 ರವರೆಗೆ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರವನ್ನು ಸಂಗೀತದೊಂದಿಗೆ ಆಯೋಜಿಸಬೇಕು ಎಂದು ಹೇಳಲಾಗಿದೆ

ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಈ ಕುರಿತಾಗಿ ಸೂಚನೆ ನೀಡಿದ್ದು, ರಾಜ್ಯದ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿಯನ್ನು ಇಲಾಖೆಯ ಶೈಕ್ಷಣಿಕ ಶಾಖೆಗೆ ಸಲ್ಲಿಸುವಂತೆ ತಿಳಿಸಿದ್ದಾರೆ.

75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಯನಮಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪತ್ರ ಬರೆದು ಸೂಚಿಸಲಾಗಿದೆ.

ವಿದ್ಯಾರ್ಥಿಗಳ ಆರೋಗ್ಯವೃದ್ಧಿಗೆ, ಮನೋಬಲ ಹೆಚ್ಚಳಕ್ಕೆ ಸೂರ್ಯನಮಸ್ಕಾರ ಸಹಕಾರಿಯಾಗುತ್ತದೆ. ಸೂರ್ಯ ನಮಸ್ಕಾರ ಮಾಡಿದವರಿಗೆ ಪ್ರಮಾಣಪತ್ರ ನೀಡಲಾಗುವುದು ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು