News Karnataka Kannada
Sunday, May 19 2024
ಬೆಂಗಳೂರು ನಗರ

ಡಿಸಿಎಂ ಅಶ್ವತ್ಥ್ ನಾರಾಯಣ ನೇತೃತ್ವದ ಸಭೆ; ಅನೇಕ ಹೊಸ ನಿಯಮಗಳು ಜಾರಿ

Photo Credit :

ಡಿಸಿಎಂ ಅಶ್ವತ್ಥ್ ನಾರಾಯಣ ನೇತೃತ್ವದ ಸಭೆ; ಅನೇಕ ಹೊಸ ನಿಯಮಗಳು ಜಾರಿ

ಬೆಂಗಳೂರು: ಹೆಚ್ಚುತ್ತಿರುವ ಕೊರೋನ ನಿಯಂತ್ರಿಸುವ ನಿತ್ತಿನಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ ಇಂದು (ಶನಿವಾರ) ನಡೆದ ಕೋವಿಡ್ ಕಾರ್ಯಪಡೆ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ಮಹತವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. 

 

ಈ ಸಭೆಯಲ್ಲಿ ಇಂದು ತೆಗೆದುಕೊಂಡ ನಿರ್ಧಾರಗಳು ಇಂತಿವೆ… 

 

* ಕೋವಿಶೀಲ್ಡ್- 45+ ರವರಿಗೆ ಮೊದಲನೇ ಲಸಿಕೆ ನೀಡಲು ಆದ್ಯತೆ.

ಮೊದಲ ಡೋಸ್ ಪಡೆದು 12 ವಾರ ಆದವರಿಗೆ ಮಾತ್ರ 2ನೇ ಡೋಸ್ ಕೊಡಬೇಕು. ಅದಕ್ಕೂ ಮೊದಲು ಯಾರಿಗೂ ಎರಡನೇ ಡೋಸ್ ಕೊಡುವಂತಿಲ್ಲ.

 

* ಕೋವ್ಯಾಕ್ಸಿನ್- ಇನ್ನು ಬರೇ 2ನೇ ಡೊಸ್ ಮಾತ್ರ ಕೊಡುವುದು. ಮೊದಲ ಡೋಸ್ ಪಡೆದು 6 ವಾರ ಆಗಿರುವವರು ಮಾತ್ರ 2ನೇ ಡೋಸ್ ಲಸಿಕೆ ಪಡೆಯಬೇಕು.

 

* ಲಸಿಕೆ ಪ್ರಮಾಣವನ್ನು ನೋಡಿಕೊಂಡು 18- 44 ವರ್ಷದವರಿಗೆ ಯಾವ ದಿನಾಂಕ ದಿಂದ ಲಸಿಕೆ ಕೊಡಬೇಕು ಎಂಬುದರ ತೀರ್ಮಾನ.

 

* ಆದ್ಯತೆಯ ಆದಾರದ ಮೇಲೆ ಲಸಿಕೆ ಕೊಡಬೇಕು. ಆದ್ಯತೆಯ ನಿರ್ಧರಿಸಲು ಮೊದಲು ಪಟ್ಟಿ ಮಾಡಬೇಕು. ಅಂಚೆ ಇಲಾಖೆ, ಕೃಷಿ ಇಲಾಖೆ, ಡೆಲಿವರಿ ಬಾಯ್ಸ್, ಬ್ಯಾಂಕ್ ಸಿಬ್ಬಂದಿ, ಇಂಟರ್ ನೆಟ್ ಪ್ರೊವೈಡರ್ಸ್ ಇತ್ಯಾದಿ.

 

* ಲಸಿಕೆ ಕೊಡುವುದನ್ನು ಆಸ್ಪತ್ರೆಗಳಿಂದ ಹೊರಗೆ, ಶಾಲೆ ಮೈದಾನ ಇತ್ಯಾದಿ ಕಡೆ ಮಾಡಲು ತೀರ್ಮಾನ. 

 

* ಕೊವಿಡ್ ಮೆಡಿಕಲ್ ತ್ಯಾಜ್ಯ ವಿಲೇವಾರಿ- ಪ್ರತಿ ಬೆಡ್ ಗೆ ಗರಿಷ್ಠ 10 ರೂಪಾಯಿ ನೀಡಲು ತೀರ್ಮಾನ. ಸರ್ಕಾರಿ ಆಸ್ಪತ್ರೆ ಗಳಲ್ಲಿನ ತ್ಯಾಜ್ಯ ವಿಲೇವಾರಿಗೆ ಈ ಕ್ರಮ

 

* ಗ್ರಾಮೀಣ ಭಾಗ/ ನಗರ ಪ್ರದೇಶಗಳ ಕೊಳೆಗೇರಿಗಳಲ್ಲಿ ಹೋಮ್ ಐಸೋಲೇಷನ್ ಇಲ್ಲ. ಗ್ರಾಮೀಣ ಭಾಗದ ಪಿಎಚ್ ಸಿ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ. ಮನೆ ಮನೆಗೆ ಹೋಗಿ ರಾಟ್ ಟೆಸ್ಟ್ ಮಾಡಬೇಕು. ಪಾಸಿಟಿವ್ ಆದವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಬೇಕು. ಗ್ರಾಮೀಣ ಮಟ್ಟದಲ್ಲಿನ ಹಾಸ್ಟೆಲ್ ಇತ್ಯಾದಿ ಕಡೆ ವ್ಯವಸ್ಥೆ. ಇದರ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ನೀಡಲು ತೀರ್ಮಾನ.

 

* ಖಾಸಗಿ ವೈದ್ಯರು ಸಲಹೆ‌ ನೀಡಿದ ಸೋಂಕಿತರಿಗೂ ಸರ್ಕಾರಿ ಮೆಡಿಕಲ್ ಕಿಟ್ ಕೊಡುವುದು

 

* ವೈರಸ್ ನ ಜೆನೆಟಿಕ್ಸೆ ಬದಲಾವಣೆ ಬಗ್ಗೆ ಅಧ್ಯಯನ ನಡೆಸುವ Genome Lab ಗಳನ್ನು ರಾಜ್ಯದ ಆರು ಕಡೆ ಸ್ಥಾಪಿಸಲು ತೀರ್ಮಾನ. ನಾಲ್ಕು ಮೆಡಿಕಲ್ ಕಾಲೇಜುಗಳಲ್ಲಿ ಹಾಗೂ ಎರಡು, ಆರೋಗ್ಯ ಇಲಾಖೆ ವತಿಯಿಂದ ಮಾಡಲು ತೀರ್ಮಾನ

 

* ಮುಂದಿನ 90 ದಿನಗಳಿಗೆ ಅಗತ್ಯ ಇರುವ ಔಷಧ ಮತ್ತು ಪರಿಕರಗಳನ್ನು ಹಂತ ಹಂತವಾಗಿ 260 ಕೋಟಿ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ. ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಟೆಂಡರ್ ಮೂಲಕ ಖರೀದಿಸಲು ತೀರ್ಮಾನ

 

* Black Fungal- ಪ್ರತಿ ವಾರ 400 ರೋಗಿಗಳಿಗೆ ಈ ರೀತಿ ಬ್ಲಾಕ್ ಫೋಂಗಲ್ ಬರುವ ನಿರೀಕೆ ಇದೆ… ವಾರಕ್ಕೆ 20,000 vials ಬೇಡಿಕೆಗೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ.

 

* ಆಮ್ಲಜನಕ ಬಳಕೆಯನ್ನು ನಿಯಂತ್ರಣ ಮಾಡುವ DRDO ಅಭಿವೃದ್ಧಿ ಪಡಿಸಿರುವ 1,000 ಯಂತ್ರಗಳನ್ನು ಪ್ರಾಯೋಗಿಕ ವಾಗಿ ಬಳಸಲು ತೀರ್ಮಾನ. ಇದಕ್ಕೆ 6ರಿಂದ 10 ಸಾವಿರ ಆಗುತ್ತದೆ.

 

* ಆಮ್ಲಜನಕ ಬಾಟ್ಲಿಂಗ್ ಯುನಿಟ್ ಗಳನ್ನು ಕೆಲವು ಕಡೆ ಸ್ಥಾಪಿಸುವುದು.

 

* ಲಸಿಕೆ- ಜಾಗತಿಕ ಟೆಂಡರ್ ಕರೆಯಲಾಗಿದೆ. ಇದಕ್ಕಾಗಿ ‌843 ಕೋಟಿ ಅನುದಾನದ ಅವಶ್ಯಕತೆ ಇದ್ದು ಇದಕ್ಕೆ ಕಾರ್ಯಪಡೆ ಒಪ್ಪಿಗೆ ನೀಡಿದೆ.

 

* ರೆಮಿಡಿಸ್ವೀರ್- 5 ಲಕ್ಷ ಇಂಜೆಕ್ಷನ್ ಖರೀದಿಗೆ‌ ಜಾಗತಿಕ ಟೆಂಡರ್. ಇದಕ್ಕೆ 75 ಕೋಟಿ ಮೀಸಲು. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು