ಬೆಂಗಳೂರು: ಡಿ.10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಕಮಪ್ ಪಂತ್ ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ಸೋಲದೇವನಹಳ್ಳಿ, ವರ್ತೂರು, ಕಾಡುಗೋಡಿ, ಕೆ ಆರ್ ಪುರಂ, ಪರಪ್ಪನ ಅಗ್ರಹಾರ, ಚಿಕ್ಕಜಾಲ, ಬೆಂಗಳೂರು ಮತ್ತು ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಡಿಸೆಂಬರ್ 8 ಸಂಜೆ 5 ಗಂಟೆಯಿಂದ ಡಿಸೆಂಬರ್ 10 ರ ಮಧ್ಯರಾತ್ರಿ 12 ಗಂಟೆವರೆಗೆ, ವೈನ್ ಶಾಪ್, ಬಾರ್ ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಹಾಗೂ ಈ ವ್ಯಾಪ್ತಿಯ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮದ್ಯ ಶೇಖರಿಸಿಡುವಂತಿಲ್ಲ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.