ಡಿಸೆಂಬರ್ 8ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 08ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶನಿವಾರ ಬೆಳಗ್ಗೆ ಜವಾದ್ ಚಂಡಮಾರುತ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿರುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾದ ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಗುರುವಾರ ಲಘುವಾಗಿ ಸಾಧಾರಣ ಮಳೆಗೆ ಸಾಕ್ಷಿಯಾಗಬಹುದು ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಶುಕ್ರವಾರದಿಂದ ವಾರಾಂತ್ಯದವರೆಗೆ ಆಂಧ್ರಪ್ರದೇಶ, ಒಡಿಶಾದಿಂದ ಗಂಗಾನದಿ ಪಶ್ಚಿಮ ಬಂಗಾಳದವರೆಗೆ ಕರಾವಳಿಯಾದ್ಯಂತ ಒಟ್ಟು 150-200 ಮಿಮೀ ಮಳೆಯ ಪ್ರಮಾಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ತಪಾಮಾನ ಮತ್ತಷ್ಟು ಇಳಿಕೆಯಾಗಲಿದೆ.

ಹೊಸದುರ್ಗ, ರಾಮದುರ್ಗ, ಲೋಂಡಾ, ಕುಂದಗೋಳ, ಕಡೂರು, ಹಾವೇರಿ, ಸಿದ್ದಾಪುರ, ಮಂಚಿಕೆರೆ, ಕ್ಯಾಸಲ್ ರಾಕ್, ಹುಕ್ಕೇರಿ, ಸಂಕೇಶ್ವರ, ಧಾರವಾಡ, ಬಿಳಿಗಿ, ಕೆಂಭಾವಿ, ಬಂಡೀಪುರ, ಬೆಳ್ಳೂರು, ತಿಪಟೂರಿನಲ್ಲಿ ಮಳೆಯಾಗಲಿದೆ.

ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ. ಎಚ್‌ಎಎಲ್‌ನಲ್ಲಿ 25.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ 17.8 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆ ರಾಜ್ಯಾದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

Swathi MG

Recent Posts

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

6 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

20 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

37 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

56 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

58 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

1 hour ago