ಡಿ.31ರ `ಕರ್ನಾಟಕ ಬಂದ್’ ಕರೆಯನ್ನು ಹಿಂತೆಗೆದುಕೊಳ್ಳುವಂತೆ ಅಶ್ವತ್ಥನಾರಾಯಣ ಮನವಿ

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಉದ್ಧಟತನ ತೋರಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ವತಃ ಮುಖ್ಯಮಂತ್ರಿಗಳು ಸದನದಲ್ಲೇ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಕನ್ನಡಪರ ಸಂಘಟನೆಗಳು ನೀಡಿರುವ ಡಿ.31ರ `ಕರ್ನಾಟಕ ಬಂದ್’ ಕರೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನವಿ ಮಾಡಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ತಮ್ಮ ಇಲಾಖೆಯ ವತಿಯಿಂದ ಶನಿವಾರ ಏರ್ಪಡಿಸಿದ್ದ ಉತ್ತಮ ಆಡಳಿತ ದಿನ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ರಾಜ್ಯದ ನೆಲ, ಜಲ ಮತ್ತು ನುಡಿಯ ವಿಚಾರಗಳಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕನ್ನಡಪರ ಸಂಘಟನೆಗಳ ಸಲಹೆಗಳನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ” ಎಂದರು.

ಬಂದ್ ಆಚರಣೆಯಿಂದ ಜನರಿಗೆ ತೊಂದರೆಯಾಗುತ್ತದೆ. ಜತೆಗೆ ಆರ್ಥಿಕ ಚಟುವಟಿಕೆಗಳಿಗೆ ಧಕ್ಕೆಯಾಗಲಿದೆ. ಸರಕಾರವು ಕನ್ನಡಪರ ಸಂಘಟನೆಗಳ ಜತೆಗೆ ಮಾತುಕತೆಗೆ ಸಿದ್ಧವಿದೆ. ಬೆಳಗಾವಿಯಲ್ಲಿ ದುಷ್ಕೃತ್ಯ ನಡೆಸಿದವರನ್ನು ಈಗಾಗಲೇ ಬಂಧಿಸಿ, ಮುಂದಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

Gayathri SG

Recent Posts

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

42 seconds ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

13 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

37 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

55 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

1 hour ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

1 hour ago