ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಂದ್ ಆಗಿರುವ ಶಾಲೆಗಳನ್ನು ಪ್ರಾರಂಭ ಮಾಡುವ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶುಕ್ರವಾರ ನಡೆಯುವ ಸಿಎಂ ಸಭೆಯಲ್ಲಿ ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ 1-9 ಅಥವಾ 5-9 ನೇ ತರಗತಿ ಪ್ರಾರಂಭ ಮಾಡುತ್ತೇವೆ. ಕೋವಿಡ್ ಪರಿಣಾಮ ಜಾಸ್ತಿ ಆಗದೇ ಹೋದ್ರೆ ನಿಗದಿಯಂತೆ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.