News Karnataka Kannada
Tuesday, April 30 2024
ಬೆಂಗಳೂರು ನಗರ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಸಿಎಂ ಬಸವರಾಜ್ ಬೊಮ್ಮಾಯಿ

Cm Bommayi
Photo Credit :

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಮೊಗ್ಗದಲ್ಲಿ ನಮ್ಮ ಸಂಘಟನೆ ಕಾರ್ಯಕರ್ತನ ಹತ್ಯೆಯಾಗಿದೆ.ಹಿಂದೂ ಹರ್ಷ ಎಂದೇ ಯುವಕ ಜನಪ್ರಿಯನಾಗಿದ್ದ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಈಗಾಗಲೇ ಗೃಹ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಶಿವಮೊಗ್ಗ ಜನತೆ ಶಾಂತಿ ಕಾಪಾಡಬೇಕು. ಯಾರೂ ಕೂಡ ಉದ್ವೇಗಕ್ಕೆ ಒಳಗಾಗಬಾರದು. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮಕ್ಕೆ ಈಗಾಗಲೇ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು