ಬೆಂಗಳೂರು ನಗರ

ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ : ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ಒಂದು ರಾಜಕೀಯ ದಾಳ. ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾವೇರಿ ಜಲವಿವಾದ ನ್ಯಾಯಮಂಡಲಿ ತೀರ್ಪು ನೀಡಿ ನೀರಿನ ಹಂಚಿಕೆಯಾಗಿದೆ. ನೀರನ್ನು ನೀಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇದೆ. ನಮ್ಮ ರಾಜ್ಯದಲ್ಲಿ ಹುಟ್ಟಿರುವ ಕಾವೇರಿ, ಇಲ್ಲಿ ಬಿದ್ದ ಮಳೆಯ ಆಧಾರದ ಮೇಲೆ ನಾವು ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯನ್ನು ರೂಪಿಸಲಾಗಿದೆ. ಇಷ್ಟೆಲ್ಲಾ ಇದ್ದರೂ ತಮಿಳುನಾಡು ತಕರಾರು ಮಾಡುತ್ತಿದೆ. ವಿವಿಧ ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಲಿ ನಮ್ಮ ಪರವಾಗಿ ಆದೇಶ ನೀಡಿದೆ. ಅದರ ತಮಿಳುನಾಡು ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಹಾಕಿದೆ. ಸರ್ವ ಪಕ್ಷ ಸಭೆ ನಡೆಸಿ ಒಗ್ಗಟ್ಟಿನಿಂದ ಇದನ್ನು ಎದುರಿಸಲು ತೀರ್ಮಾನ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಣಯ ಮಾಡಿದ್ದಾರೆ. ಇದಕ್ಕೆ ಯಾವುದೇ ಬೆಲೆ ಇಲ್ಲ ಹಾಗೂ ಕಾನೂನಿನ ಪ್ರಕಾರವೂ ಮೌಲ್ಯವಿಲ್ಲ. ರಾಜಕೀಯ ತಂತ್ರವಷ್ಟೇ ಎಂದರು. ಈ ರೀತಿಯ ಅನೇಕ ನಿರ್ಣಯಗಳಾಗಿವೆ. ಅದಕ್ಕೆ ಬೆಲೆ ಇಲ್ಲ ಎಂದು ಸಿಎಂ ಹೇಳಿದರು.

ಸರ್ವ ಪಕ್ಷ ಸಭೆಯಲ್ಲಿ ನಿರ್ಣಯಿಸಿದಂತೆ ಡಿಪಿಆರ್ ಪಡೆದು ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆದು ಯೋಜನೆ ಅನುಷ್ಠಾನಕ್ಕೆ ಎಲ್ಲ ಕ್ರಮವನ್ನು ಸರಕಾರ ತೆಗೆದುಗೊಳ್ಳಲಿದೆ ಎಂದರು.

ಬೆಳಗಾವಿ ಸಮಸ್ಯೆಗಳ ದಿಕ್ಕು ಬದಲಾಯಿಸಲು ಹೇಳಿಕೆ
ಶಿವಸೇನೆ ನಾಯಕ ಸಂಜಯ ರಾವತ್ ಅವರು ಬೆಳಗಾವಿ ಫೈಲ್ಸ್ ಬರಬೇಕು ಅಲ್ಲಿಯೂ ಅನೇಕ ಘಟನೆಗಳು ನಡೆದಿವೆ ಎಂದು ಆರೋಪಿಸಿರುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬೆಳಗಾವಿ ವಿಷಯದ ಬಗ್ಗೆ ಈಗಾಗಲೇ ತೀರ್ಪು ನೀಡಲಾಗಿದೆ. 1956 ನಲ್ಲಿ ರಾಜ್ಯ ಪುನರ್ ವಿಂಗಡಣೆ ಆಯೋಗದ ಅನುಗುಣವಾಗಿ ಆಗಿದೆ. ಕನ್ನಡ ಮಾತನಾಡುವ ಸೊಲ್ಲಾಪುರ, ಅಕ್ಕಲ್ ಕೋಟೆ ಭಾಗಗಳು ಮಹಾರಾಷ್ಟ್ರದಲ್ಲಿ ಉಳಿದಿವೆ. ಈ ರೀತಿ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಬೆಳಗಾವಿ ಹೆಸರಿನಲ್ಲಿ ಅಲ್ಲಿರುವ ಸಮಸ್ಯೆಗಳ ದಿಕ್ಕು ಬದಲಾಯಿಸಲು ಈ ಕೆಲಸವನ್ನು ಮಾತನಾಡುತ್ತಾರೆ ಎಂದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

3 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

4 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

4 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

5 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

5 hours ago