ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ನೀರು ಬಿಡಲು ಸಾಧ್ಯವಿಲ್ಲ

ಹೊಸದಿಲ್ಲಿ: ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸೋಮವಾರ ತಿಳಿಸಿದೆ. “ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ  ಕುಡಿಯುವ ನೀರಿಗೆ ತೀವ್ರ ಅಭಾವವಿದೆ. ಪ್ರಸ್ತುತ ಜಲಾಶಯಗಳಲ್ಲಿರುವ ನೀರನ್ನು ತಮಿಳುನಾಡಿಗೆ ಹರಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ. ಹೀಗಾಗಿ ಡಿಸೆಂಬರ್ ಅಂತ್ಯದ  ಬಳಿಕವಷ್ಟೇ ತಮಿಳುನಾಡಿಗೆ ನೀರು ಬಿಡಲು ಸಾಧ್ಯ” ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಹೇಳಿದೆ.

ಕಳೆದ ಸೆಪ್ಚೆಂಬರ್ 20ರಂದು ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ನೀಡಿದ್ದ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ ಎಂದು ತಮಿಳುನಾಡು ಸಲ್ಲಿಸಿರುವ ಅರ್ಜಿಯ  ವಿಚಾರಣೆ ಇಂದು ನಡೆಯುತ್ತಿದ್ದು, ವಿಚಾರಣೆಯಲ್ಲಿ ಕರ್ನಾಟಕ ಡಿಸೆಂಬರ್ ಅಂತ್ಯದವೆರಗೂ ನೀರು ಬಿಡಲು ಸಾಧ್ಯವಿಲ್ಲ ಎಂದು ತನ್ನ ವಾದ ಮಂಡಿಸಿದೆ.

ಕಾವೇರಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಈ ವರೆಗೂ 3 ಮಧ್ಯಂತರ ಆದೇಶಗಳನ್ನು ನೀಡಿದ್ದು, ಈ ಮೂರು ಆದೇಶಗಳ ಅನ್ವಯ ಕರ್ನಾಟಕ ತಮಿಳುನಾಡಿಗೆ ಎಷ್ಟು  ಪ್ರಮಾಣದ ನೀರು ಹರಿಸಿದೆ ಎಂಬ ಲೆಕ್ಕಾಚಾರ ಮಾಡಬೇಕಿದೆ. ಈ ಹಿಂದೆ 52 ಟಿಎಂಸಿ ನೀರನ್ನು ಬಿಡುವಂತೆ ತಮಿಳುನಾಡು ಕೋರಿದೆಯಾದರೂ, ಈ ಸಂಬಂಧ ಸುಪ್ರೀಂ ಕೋರ್ಟ್ 3  ಮಧ್ಯಂತರ ಆದೇಶಗಳನ್ನು ಹೊರಡಿಸಿದೆ. ಹೀಗಾಗಿ ಈ ಆದೇಶಗಳ ಬಳಿಕ ಕರ್ನಾಟಕ ಹರಿಸಿದ ನೀರಿನ ಪ್ರಮಾಣದ ಲೆಕ್ಕಾಚಾರ ಬಿಳಿಗುಂಡ್ಲುವಿನ ಮಾಪನದಲ್ಲಿ ಇಂದು ನಡೆಯುವ  ಸಾಧ್ಯತೆ ಇದೆ. ಇದೇ ವೇಳೆ ಕಳೆದ ಸೆಪ್ಟೆಂಬರ್ 20ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪರಿಷ್ಕರಿಸುವಂತೆ ಕರ್ನಾಟಕ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಲಿದ್ದು,  ಅದರ ವಿಚಾರಣೆಯನ್ನೂ ಕೂಡ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

Desk

Recent Posts

ಕೊಪ್ಪಳದಲ್ಲಿ ಒಂದೇ ದಿನ ತಂದೆ ಮಗ ಮೃತ್ಯು

ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.

11 mins ago

ಬರ ಪರಿಹಾರ : ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದ ಆರ್‌ ಅಶೋಕ್‌

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ…

30 mins ago

ನೆರೆಮನೆಯ ಕಾರಿನ ಗ್ಲಾಸ್‌ ಪುಡಿ ಮಾಡಿದ ಶಿಕ್ಷಕಿ: ದೂರು ದಾಖಲು

ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

53 mins ago

ಹಾಸನ ಅಶ್ಲೀಲ ವಿಡಿಯೋ ಪ್ರಕರಣ: ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದ ಹೆಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಉಪ್ಪು ತಿಂದವನು ನೀರು…

1 hour ago

ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವು

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ರಾಜಾಜಿನಗರ 6th ಬ್ಲಾಕ್‌ ನಲ್ಲಿ…

2 hours ago

ಕಾಂಗ್ರೆಸ್‍ ನ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

2 hours ago