ತಾಪಮಾನ ಭಾರೀ ಕುಸಿತ: ಶಿಮ್ಲಾವನ್ನೂ ಮೀರಿಸುವಂತಿದೆ ಬೆಂಗಳೂರು ವಾತಾವರಣ

ಬೆಂಗಳೂರು: ಬೆಂಗಳೂರಿನಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ಇಲ್ಲಿನ ವಾತಾವರಣ ಶಿಮ್ಲಾವನ್ನೂ ಮೀರಿಸುವಂತಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿ 23 ಡಿಗ್ರಿ ಸೆಲ್ಸಿಯಸ್​ಗಿಂತಲೂ ತಾಪಮಾನ ಕುಸಿತವಾಗಿದ್ದು, ಬೆಳಗ್ಗೆಯಿಂದ ರಾತ್ರಿವರೆಗೂ ಮೋಡ ಮುಸುಕಿದ ವಾತಾವರಣವಿದ್ದು, ಚುಮುಗುಡುವ ಚಳಿಗೆ ಬೆಂಗಳೂರಿಗರು ಗಡಗಡ ನಡುಗುತ್ತಿದ್ದಾರೆ.

ಗುರುವಾರ ತಾಪಮಾನವು 11 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿದಿದ್ದರಿಂದ ಕಳೆದ 50 ವರ್ಷಗಳಲ್ಲಿ ಮೇ ತಿಂಗಳಲ್ಲಿ ಬೆಂಗಳೂರು ಎರಡನೇ ಅತಿ ಚಳಿಯ ದಿನವನ್ನು ದಾಖಲಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ನಿಂದ 23 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ.

1972ರ ಮೇ 14ರಂದು ಬೆಂಗಳೂರಿನಲ್ಲಿ ಕೊನೆಯ ಬಾರಿಗೆ ತಂಪಾದ ದಿನವನ್ನು ದಾಖಲಿಸಿತ್ತು. ಇಲ್ಲಿನ ತಾಪಮಾನವು 22.2 ಡಿಗ್ರಿ ಸೆಲ್ಸಿಯಸ್ ಇತ್ತು. ಈಶಾನ್ಯ ಮತ್ತು ದಕ್ಷಿಣ ಕರ್ನಾಟಕದಲ್ಲಿ ಕಳೆದ 10 ದಿನಗಳಿಂದ ಭಾರೀ ಮಳೆಯಾಗುತ್ತಿತ್ತು. ಆದರೆ, ಇದೀಗ ಮಳೆ ಕಡಿಮೆಯಾಗಿದ್ದರೂ ಚಳಿಯ ವಾತಾವರಣ ಹೆಚ್ಚಾಗಿದೆ.

ಈ ತಂಪಾದ ವಾತಾವರಣಕ್ಕೆ ಅಸಾನಿ ಚಂಡಮಾರುತ ಕಾರಣ ಎನ್ನಲಾಗಿದ್ದು,ಇದರಿಂದ ಬೆಂಗಳೂರು ಕಳೆದ 50 ವರ್ಷಗಳಲ್ಲಿ 2ನೇ ಅತಿ ಕಡಿಮೆ ವಾತಾವರಣ ದಾಖಲಿಸುವ ಮೂಲಕ ದಾಖಲೆ ನಿರ್ಮಿಸಿದೆ.

ಗುರುವಾರ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24.3 ಡಿಗ್ರಿ ಸೆಲ್ಸಿಯಸ್ ಮತ್ತು ಶುಕ್ರವಾರ ಬೆಳಿಗ್ಗೆ 23 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ಇನ್ನೆರಡು ದಿನ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ ಎಂದು IMD ಮುನ್ಸೂಚನೆ ನೀಡಿರುವುದರಿಂದ ಚಳಿಯ ವಾತಾವರಣವು ಮುಂದುವರಿಯುವ ಸಾಧ್ಯತೆಯಿದೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

6 hours ago