News Karnataka Kannada
Thursday, May 09 2024
ಬೆಂಗಳೂರು ನಗರ

ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Rain Main Newsk 2307886304 3
Photo Credit :

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಸೋಮವಾರದ ತನಕವೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. 3.9 ಮೀಟರ್‌ನಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು