News Karnataka Kannada
Saturday, May 04 2024
ಬೆಂಗಳೂರು ನಗರ

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅವಧಿ ಒಂದು ಗಂಟೆ ವಿಸ್ತರಣೆ

Mangaluru South has the highest number of transgender voters
Photo Credit : IANS

ಜೂನ್ 13ರಂದು ನಡೆಯಲಿರುವ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಅವಧಿ ಒಂದು ಗಂಟೆ ವಿಸ್ತರಣೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿ ಜಿ.ಸಿ.ಪ್ರಕಾಶ್ ಮಾಹಿತಿ ನೀಡಿದರು.

ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ 1,41,961 ಮಂದಿ ಪದವೀಧರ ಮತದಾರರಿದ್ದಾರೆ. ಈ ಪೈಕಿ 82,505 ಪುರುಷರು 59,432 ಮಹಿಳೆಯರು ಹಾಗೂ 24 ಇತರೆ ಮತದಾರರಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತವನ್ನು ಚಲಾಯಿಸಲು ಅವಕಾಶವಿದ್ದು, ಮತದಾನ ಮಾಡಲು ಒಂದು ಗಂಟೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು.

ಅರ್ಹ ಮತದಾರರು ರಾಜ್ಯದ ಯಾವುದೇ ಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಕೂಡ, ಮತದಾನ ಮಾಡಲು ಅನುಕೂಲವಾಗುವಂತೆ ರಜೆ ನೀಡಲು ಆದೇಶಿಸಲಾಗಿದೆ. ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ ಸೇರಿದಂತೆ 4 ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಟ್ಟು 150 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಪ್ರಕಾಶ್ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು