News Karnataka Kannada
Monday, May 06 2024
ಬೆಂಗಳೂರು ನಗರ

ದಿ ಕಾಶ್ಮೀರ್​ ಫೈಲ್ಸ್’ ವೀಕ್ಷಿಸಲು ಸಚಿವರು, ಶಾಸಕರಿಗೆ ಸ್ಪೀಕರ್ ಕಾಗೇರಿ ಆಹ್ವಾನ

Kageri
Photo Credit :

ಬೆಂಗಳೂರು: ದೇಶದೆಲ್ಲೆಡೆ ಉತ್ತಮ​ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ವೀಕ್ಷಿಸಲು ಕರ್ನಾಟಕದ ಸಚಿವರು, ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ.

ಈ ಬಗ್ಗೆ ಸದನದಲ್ಲಿ ಎಲ್ಲ ಸದಸ್ಯರಿಗೆ ಸ್ಪೀಕರ್ ಕಾಗೇರಿ ಆಹ್ವಾನ ನೀಡಿದ್ದಾರೆ.ಮಂಗಳವಾರ (ಮಾ.15) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು, ಶಾಸಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ವೀಕ್ಷಿಸಲಿದ್ದು, ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ಸಿನಿಮಾ ನೋಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಪಕ್ಷ ಶಾಸಕರನ್ನು ಕೂಡ ‘ದಿ ಕಾಶ್ಮೀರ್​ ಫೈಲ್ಸ್’ ಚಿತ್ರ ವೀಕ್ಷಣೆಗೆ ಆಹ್ವಾನಿಸುವ ಮೂಲಕ ಸ್ಪೀಕರ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಈ ಸಿನಿಮಾದ ಬಗ್ಗೆ ದೇಶದಲ್ಲಿ ಪರ ಮತ್ತು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಡೆ ಭಾರೀ ಅಚ್ಚರಿಗೆ ಕಾರಣವಾಗಿದೆ. ನೆನ್ನೆಯಷ್ಟೇ ಈ ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಕೆಲವು ಮಂತ್ರಿಗಳು ವೀಕ್ಷಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು