ದುರ್ಬಲಗೊಂಡ ಮಳೆ: ಆತಂಕದಲ್ಲಿ ರೈತರು

ಬೆಂಗಳೂರು: ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಒಂದಷ್ಟು ಮಳೆಯಾಗುತ್ತಿದೆಯಾದರೂ ಮುಂಗಾರು ಆರಂಭದಲ್ಲಿ ಸುರಿದ ಮಳೆಯನ್ನು ನಂಬಿ ಕೃಷಿ ಮಾಡಿದ್ದ ಬಯಲು ಸೀಮೆಯ ರೈತರು ಇದೀಗ ಪರದಾಡುವಂತಾಗಿದೆ. ಮಳೆ ಕೈಕೊಟ್ಟ ಕಾರಣದಿಂದ ಜೋಳ ಸೇರಿದಂತೆ ಕೆಲವು ಬೆಳೆಗಳು ಒಣಗುತ್ತಿವೆ. ಕಳೆದ ಎರಡು ತಿಂಗಳಿನಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಇನ್ನೊಂದು ವಾರ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ ಎಂದು ಹವಾಮಾನ ತಜ್ಞ ವಿ.ಎಸ್.ಪ್ರಕಾಶ್ ತಿಳಿಸಿದ್ದು,   ಮುಂಗಾರು  ಮಳೆ ಇನ್ನೂ ಒಂದು ವಾರ ಕಾಲ ದುರ್ಬಲವಾಗಲಿದೆ ಎಂದಿದ್ದಾರೆ.

ಇದೇ 6 ಮತ್ತು 7ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಗೋಚರಿಸುತ್ತಿದ್ದು, ಉತ್ತರ ಒಳನಾಡಿನಲ್ಲಿ  ಇನ್ನೂ ಎರಡು ವಾರಗಳ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ ಎಂದಿದ್ದಾರೆ.

ಬಯಲು ಸೀಮೆಯಲ್ಲಿ ಮಳೆಯ ಕೊರತೆ ಈ ಬಾರಿಯೂ ಮುಂದುವರೆದರೆ ಜನ ಜಾನುವಾರುಗಳಿಗೆ ಭಾರೀ ತೊಂದರೆಯಾಗಲಿದೆ. ಮೈಸೂರಿನ ಹುಣಸೂರು, ಪಿರಿಯಾಪಟ್ಟಣ, ಕೆ.ಆರ್.ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ರೈತರು ತಂಬಾಕು ಬೆಳೆದಿದ್ದಾರೆ. ನೀರಿನ ಅನುಕೂಲ ಇರುವವರು ಕೊಳವೆಬಾವಿಯ ನೀರನ್ನು ಹಾಯಿಸಿ ಕೃಷಿ ಮಾಡುತ್ತಿದ್ದರೆ, ಇನ್ನು ಕೆಲವರು ಮಳೆಯನ್ನು ನಂಬಿ ಕೃಷಿ ಮಾಡಿದ್ದು ಇದೀಗ ಮಳೆ ಬಾರದ ಆಕಾಶ ನೋಡುವಂತಾಗಿದೆ

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

1 hour ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago