ಬೆಂಗಳೂರು: ದೇವನಹಳ್ಳಿ ತಾಲೂಕಿನ ಬೂದಿಗೆರೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪ್ಟಟ ಕಾರಣ, ಶಾಲೆಯ 250 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಗುರುವಾರ ಒಳಪಡಿಸಲಾಗಿತ್ತು.
ಇದರ ವರದಿ ಇಂದು ಬಂದಿದ್ದು, 18 ವಿದ್ಯಾರ್ಥಿಗಳು ಹಾಗೂ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಕೋವಿಡ್ ಕಾರಣದಿಂದಾಗಿ ಸೋಮವಾರ ಶಾಲೆಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಿಸೋ ಸಾಧ್ಯತೆ ಇದೆ. ಇನ್ನೂ 150 ವಿದ್ಯಾರ್ಥಿಗಳ ಪರೀಕ್ಷಾ ವರದಿ ಬರೋದು ಬಾಕಿ ಇದೆ.