News Karnataka Kannada
Tuesday, May 07 2024
ಬೆಂಗಳೂರು ನಗರ

ದೇಶದಾದ್ಯಂತ ಇಂಧನ ದರ ಹೆಚ್ಚಳ: ಬೆಂಗಳೂರಿನಲ್ಲಿ ₹110ರ ಗಡಿ ದಾಟಿದ ಪೆಟ್ರೋಲ್‌

Here's what you need to know about petrol, diesel prices today
Photo Credit :

ಬೆಂಗಳೂರು : ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರವೂ ದೇಶದಾದ್ಯಂತ ಇಂಧನ ದರದಲ್ಲಿ ಹೆಚ್ಚಳ ಮಾಡಿವೆ. ಕಳೆದ 15 ದಿನಗಳಲ್ಲಿ 13ನೇ ಬಾರಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರಿಗೆ 84 ಪೈಸೆಯಷ್ಟು ಹೆಚ್ಚಾಗಿದ್ದು ₹110.25ಕ್ಕೆ ಏರಿಕೆ ಆಗಿದೆ. ಡೀಸೆಲ್‌ ದರ ಲೀಟರಿಗೆ 78 ಪೈಸೆ ಹೆಚ್ಚಾಗಿದ್ದು ₹94.01ಕ್ಕೆ ತಲುಪಿದೆ. ಮಾರ್ಚ್‌ 22ರಿಂದ ಏಪ್ರಿಲ್‌ 4ರವರೆಗೆ ಬೆಂಗಳೂರಿನಲ್ಲಿ ಪೆಟ್ರೋಲ್‌ ದರವು ಲೀಟರಿಗೆ ₹9.59ರಷ್ಟು ಮತ್ತು ಡೀಸೆಲ್‌ ದರ ₹8.98ರಷ್ಟು ಹೆಚ್ಚಳ ಆಗಿದೆ. ಸ್ಥಳೀಯ ಮಾರಾಟ ತೆರಿಗೆ ಮತ್ತು ಸಾಗಣೆ ವೆಚ್ಚಕ್ಕೆ ಅನುಗುಣವಾಗಿ ಮಾರಾಟ ದರವು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ.

ದೆಹಲಿಯಲ್ಲಿ ಇಂಧನ ದರ 80 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್‌ ದರ ಲೀಟರಿಗೆ ₹104.61 ಮತ್ತು ಡೀಸೆಲ್‌ ದರ ಲೀಟರಿಗೆ ₹95.87ಕ್ಕೆ ಏರಿಕೆ ಆಗಿದೆ. ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 84 ಪೈಸೆ ಹೆಚ್ಚಳವಾಗಿ ₹119.67 ಮತ್ತು ಡೀಸೆಲ್‌ಗೆ 85 ಪೈಸೆ ಏರಿಕೆಯಾಗಿ ₹103.92 ತಲುಪಿದೆ.

ಶ್ರೀನಗರದಿಂದ ಕೊಚ್ಚಿವರೆಗೂ ಬಹುತೇಕ ನಗರಗಳಲ್ಲಿ ಲೀಟರ್‌ ಪೆಟ್ರೋಲ್‌ ದರ ₹110 ಸಮೀಪಿಸುತ್ತಿದೆ. ಹೈದರಾಬಾದ್‌, ಪಾಟ್ನಾ, ಭುವನೇಶ್ವರ, ತಿರುವಂತಪುರಂ, ಮುಂಬೈ, ರಾಯ್‌ಪುರ್‌ ಹಾಗೂ ರಾಜಸ್ಥಾನ, ಮಧ್ಯ ಪ್ರದೇಶ, ತೆಲಂಗಾಣ ರಾಜ್ಯಗಳ ಹಲವು ನಗರಗಳಲ್ಲಿ ಪ್ರತಿ ಲೀಟರ್‌ ಡೀಸೆಲ್‌ ದರ ₹100ರ ಗಡಿ ದಾಟಿದೆ.

ಆಂಧ್ರ ಪ್ರದೇಶದ ಚಿತ್ತೂರ್‌ನಲ್ಲಿ ಪ್ರತಿ ಲೀಟರ್‌ ಡೀಸೆಲ್‌ ದರ ದೇಶದಲ್ಲೇ ದುಬಾರಿ (₹105.52) ಆಗಿದೆ. ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ₹120.65ಕ್ಕೆ ಮುಟ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು