ದೇಶಭಕ್ತರನ್ನು ಗೌರವಿಸಿ, ವದಂತಿಗಳನ್ನು ಹರಡದಿರಲು ಸಿಎಂ ಮನವಿ

ಬೆಂಗಳೂರು: ಶಿವಾಜಿ ಮಹಾರಾಜ್, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಇವರೆಲ್ಲರೂ ದೇಶಭಕ್ತರು. ಅವರನ್ನು ಗೌರವಿಸಬೇಕು ಹಾಗೂ ವದಂತಿಗಳನ್ನು ಹರಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಶಿವಾಜಿ ಮಹಾರಾಜ್, ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ಚೆನ್ನಮ್ಮ ದೇಶಭಕ್ತರು. ದೇಶಕ್ಕೆ ಸ್ವತಂತ್ರ ತಂದುಕೊಟ್ಟು ದೇಶವನ್ನು ಒಗ್ಗೂಡಿಸಿದವರು. ಅವರ ಹೆಸರಿನಲ್ಲಿ ವಿಭಜನೆ ಮಾಡುವುದು ಖಂಡನೀಯ. ಇಂತಹ ಕೃತ್ಯಗಳನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಿಂಸಾಚಾರ ಸಹಿಸುವುದಿಲ್ಲ
ಹಿಂಸಾಚಾರ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಪುಂಡಾಟ ನಡೆಸುವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು. ಶಿವಾಜಿ ಹಾಗೂ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಭಗ್ನಗೊಳಿಸಿದ ಆರೋಪದಲ್ಲಿ 27 ಜನರನ್ನು ಬೆಳಗಾವಿಯಲ್ಲಿ ಹಾಗೂ ಮೂವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದರು.

ಸುಳ್ಳು ಸುದ್ದಿ ಹರಡಬೇಡಿ
ಕಳೆದ ಎರಡು ದಿನಗಳಿಂದ ಘಟನೆಗೆ ಸಂಬಂಧಿಸಿದಂತೆ ಬೇರೆ ಬೇರೆ ರೀತಿಯಲ್ಲಿ ಪ್ರಚಾರ ಪಡೆದುಕೊಳ್ಳುತ್ತಿದೆ. ಹೇಳದೆ ಇರುವುದನ್ನು ಹೇಳಲಾಗಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರವಾಗಿದೆ. ದೇಶಭಕ್ತರ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಆದರಗಳಿವೆ ಎಂದು ಸ್ಪಷ್ಟಪಡಿಸಿದರು. ಯಾರೂ ಸುಳ್ಳು ಸುದ್ದಿಗಳನ್ನಾಗಲಿ, ಪ್ರಚೋದನೆಯನ್ನಾಗಲಿ ಹರಡಬಾರದು ಎಂದು ಮನವಿ ಮಾಡಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago