ಬೆಂಗಳೂರು: ಯಾವುದೇ ಉತ್ತರ ಪತ್ರಿಕೆಗಳು ಸೋರಿಕೆಯಿಲ್ಲದೆ 2020ರ ಪಿಯುಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಕೊರೊನಾದಿಂದಾಗಿ ಬಾಕಿ ಉಳಿದಿದ್ದ ಇಂಗ್ಲಿಷ್ ಪರೀಕ್ಷೆಯು ಗುರುವಾರ ಮುಕ್ತಾಯಗೊಂಡ ಬಳಿಕ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವರು.
ಎಲ್ಲಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆಗಳನ್ನು ನಡೆಸಲಾಗಿದೆ. ನಾನು ಇಂದು ಎರಡು ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಎಲ್ಲಾ ಮಕ್ಕಳು ಮಾಸ್ಕ್ ಧರಿಸಿದ್ದು ಮತ್ತು ಪರೀಕ್ಷೆ ಬರೆಯುತ್ತಿರುವುದು ಕಂಡುಬಂತು ಎಂದು ಅವರು ತಿಳಿಸಿದರು.
ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಕುಡ ಮಾಸ್ಕ್, ಕೈಗಳಿಗೆ ಗ್ಲೌಸ್ ಧರಿಸಿದ್ದರು. ಆರೋಗ್ಯ ತಪಾಸಣೆ ವೇಳೆ ತಾಪಮಾನ ಹೆಚ್ಚು ಕಂಡುಬಂದ ವಿದ್ಯಾರ್ಥಿಗಳನ್ನು ಬೇರೆ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗಿದೆ ಎಂದರು.