News Karnataka Kannada
Monday, April 29 2024
ಬೆಂಗಳೂರು ನಗರ

ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ-ಹೆಚ್ಡಿಕೆ

Photo Credit :

ಬೆಂಗಳೂರು : ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸಂಭವಿಸಿದ ಉದ್ವಿಗ್ನ ಪರಿಸ್ಥಿತಿ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ. ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್‌ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು