ನಂದಿನಿ ತುಪ್ಪದ ಪ್ಯಾಕೆಟ್ ಮೇಲೆ ಹೊಲೊಗ್ರಾಂ-ಕ್ಯೂಆರ್ ಕೋಡ್ ನಮೂದಿಸಲು ನಿರ್ಧಾರ

ಬೆಂಗಳೂರು : ಇತ್ತೀಚೆಗಷ್ಟೇ ಮೈಸೂರಿನ ಹೊಸಹುಂಡಿಯಲ್ಲಿ ನಂದಿನಿ ನಕಲಿ ತುಪ್ಪ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದ ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳು ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಹೀಗಾಗಿ ನಂದಿನಿ ನಕಲಿಯಾಗಿ ಮಾರಾಟವಾಗುತ್ತಿರುವುದು ಬೆಳಕಿಗೆ ಬಂದಿತ್ತು.

ಈ ನಿಟ್ಟಿನಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ ನಂದಿನಿ ತುಪ್ಪದ ಪ್ಯಾಕೆಟ್ ಗಳ ಮೇಲೆ ಹೊಲೊಗ್ರಾಂ ಹಾಗೂ ಕ್ಯೂಆರ್ ಕೋಡ್ ನಮೂದಿಸಲು ಮುಂದಾಗಿದೆ.

ಅಲ್ಲಿ ಡಾಲ್ಡಾ, ಪಾಮ್ ಆಯಿಲ್, ರಾಸಾಯನಿಕ ಬಣ್ಣ ಬಳಸಿ ನಕಲಿಯಾಗಿ ನಂದಿನಿ ತುಪ್ಪವನ್ನು ತಯಾರಿಸಲಾಗುತ್ತಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕರ್ನಾಟಕ ಹಾಲು ಮಹಾ ಮಂಡಳಿ ಎಚ್ಚೆತ್ತುಕೊಂಡು ಈ ನಿರ್ಧಾರಕ್ಕೆ ಬಂದಿದೆ.

ಹೀಗಾಗಿ ಜನರಿಗ ಶುದ್ಧ ತುಪ್ಪ ಒದಗಿಸುವ ನಿಟ್ಟಿನಲ್ಲಿ ಕೆಎಂಎಫ್ ಹೊಸ ಹೆಜ್ಜೆ ಇಟ್ಟಿದೆ. ಅಲ್ಲದೇ, ರಾಜ್ಯದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ನಂದಿನಿ ಮಾದರಿಗಳನ್ನು ಪಡೆದು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಅಲ್ಲದೇ, ಗ್ರಾಹಕರಿಗಾಗಿ ಟೋಲ್ ಫ್ರೀ ನಂಬರ್ 18004258030ಗೆ ಕರೆ ಮಾಡಿ ತಿಳಿಸುವಂತೆ ಕೂಡ ಕೆಎಂಎಫ್ ಹೇಳಿದೆ.

Gayathri SG

Recent Posts

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

13 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

22 mins ago

ಪತ್ರಿಕಾ ವಿತರಕ ರೈಲಿಗೆ ಸಿಲುಕಿ ಆತ್ಮಹತ್ಯೆ

ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

36 mins ago

ಮಲೆ ಮಾದಪ್ಪನಿಗೆ ಬೆಳ್ಳಿ ಆರತಿ ತಟ್ಟೆ ನೀಡಿದ ದಾನಿ : ಹೇಗಿದೆ ಗೊತ್ತಾ?

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ…

45 mins ago

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

1 hour ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

1 hour ago