ನಗರ, ಪಟ್ಟಣ ವಾಸಿಗಳು ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆ : ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ನಗರವಾಸಿಗಳು, ಪಟ್ಟಣವಾಸಿಗಳ ಅಭಿಪ್ರಾಯ ಕಾಂಗ್ರೆಸ್ ಪರ ವಾಲುತ್ತಿದೆ ಎಂಬುದಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವೇ ಸ್ಪಷ್ಟ ನಿದರ್ಶನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ನಾನು ಅಧ್ಯಕ್ಷನಾದ ಮೇಲೆ ಮಾತ್ರ ಕಾಂಗ್ರೆಸ್ ಚುನಾವಣೆಗಳನ್ನು ಗೆಲ್ಲುತ್ತಿಲ್ಲ. ಕಾಂಗ್ರೆಸ್ ಪಕ್ಷ ಗೆಲ್ಲುವುದರ ಹಿಂದೆ ರಾಜ್ಯದ ಜನರ ಅಭಿಪ್ರಾಯ ಅಡಗಿದೆ ಎಂದು ಗುರುವಾರ ಅವರು ಪ್ರತಿಕ್ರಿಯೆ ನೀಡಿದರು.

ಸಾಮಾನ್ಯವಾಗಿ ಶಾಸಕರಿರುವ ಕಡೆ ಆಡಳಿತ ಪಕ್ಷಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೆಚ್ಚಿನ ಶಕ್ತಿ ಇರುತ್ತದೆ. ಬಿಜೆಪಿ ಆಡಳಿತ ಪಕ್ಷವಾಗಿದ್ದರೂ, ಬಿಜೆಪಿ ಶಾಸಕರಿದ್ದರೂ ಜನರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಇದು ರಾಜ್ಯದ ಜನರ ಭಾವನೆ ಯಾವ ರೀತಿ ಇದೆ ಎಂಬುದಕ್ಕೆ ಸಾಕ್ಷಿ. ಇನ್ನೂ ಫಲಿತಾಂಶ ಬರುವುದು ಬಾಕಿ ಇದೆ. ಪೂರ್ಣ ಫಲಿತಾಂಶ ಬಂದ ನಂತರ ಅಂಕಿ-ಅಂಶಗಳ ಸಮೇತ ಮಾತನಾಡುತ್ತೇನೆ ಎಂದು ಹೇಳಿದರು.

ಇದು ಮುಂಬರುವ ವಿಧಾನಸಭೆ ಚುನಾವಣೆ ದಿಕ್ಸೂಚಿಯೇ ಎಂಬ ಪ್ರಶ್ನೆಗೆ, ‘ಮಾಧ್ಯಮಗಳೇ ಇದನ್ನು ವಿಮರ್ಶೆ ಮಾಡಲಿ. ಆಡಳಿತ ಪಕ್ಷವಿದ್ದರೂ, ಶಾಸಕರು, ಮಂತ್ರಿಗಳ ಕ್ಷೇತ್ರದಲ್ಲಿ ಏನೇನಾಗಿದೆ, ಜನ ಯಾವ ರೀತಿ ತೀರ್ಪು ನೀಡುತ್ತಿದ್ದಾರೆ ಎಂಬುದನ್ನು ನೋಡಿ. ಜನರ ತೀರ್ಪನ್ನು ನಿರ್ಲಕ್ಷಿಸಿ ಸಬೂಬು ಹೇಳಲು ಬಿಜೆಪಿಗೆ ಸಾಧ್ಯವಿಲ್ಲ. ಜನ ನಮ್ಮ ಮೇಲೆ ವಿಶ್ವಾಸ ಇಡುತ್ತಿದ್ದು, ಅವರ ನಿರೀಕ್ಷೆಯಂತೆ ನಡೆಯಬೇಕಾಗುತ್ತದೆ’ ಎಂದು ಹೇಳಿದರು.

Sneha Gowda

Recent Posts

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

5 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

23 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

35 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

53 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

9 hours ago